ಭಾನುವಾರ, ಏಪ್ರಿಲ್ 11, 2021
27 °C

ಚಿಕ್ಕಬಳ್ಳಾಪುರದಲ್ಲಿ ಮೂರನೇ ದಿನವೂ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಮೂರು ದಿನಗಳಿಂದ ಚಿಕ್ಕಬಳ್ಳಾಪುರ ನಗರ ಸೇರಿದಂತೆ ಹಲವು ತಾಲ್ಲೂಕುಗಳಲ್ಲಿ ಮಳೆಯಾಗುತ್ತಿದ್ದು, ಭಾನುವಾರವೂ ಜಿಲ್ಲೆಯ ಹಲವೆಡೆ ಮಳೆ ಸುರಿಯಿತು.

ಮಳೆಯಿಂದಾಗಿ ನಗರದ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ಬೀದಿ‌ಬದಿ ವ್ಯಾಪಾರಿಗಳು ಪರದಾಡಬೇಕಾಯಿತು. ವಾಹನ ಸಂಚಾರಕ್ಕೂ ಸಮಸ್ಯೆಯಾಗಿತ್ತು. ಜೋರು ಮಳೆಯಿಂದಾಗಿ ಚರಂಡಿಗಳು ತುಂಬಿ ಹರಿದಿದ್ದು, ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿಕೊಂಡಿತು.

ಜಿಲ್ಲೆಯಾದ್ಯಂತ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿತ್ತು. ಸಂಜೆ ವೇಳೆಗೆ ಮಳೆ ಸುರಿಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು