ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನಕ್ಕೆ ಆಗ್ರಹಿಸಿ ಜಿಲ್ಲೆಯ ವಿವಿಧ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಬುಧವಾರ ಆಯಾ ನಗರ ಸ್ಥಳೀಯ ಸಂಸ್ಥೆಗಳ ಆವರಣದಲ್ಲಿ ಪ್ರತಿಭಟಿಸಿದರು.

ಚಿಂತಾಮಣಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ನಗರಸಭೆ ಪೌರಾಯುಕ್ತ ಚಲಪತಿ, ‘ಪೌರಕಾರ್ಮಿಕರಿಂದ ಹಿಡಿದು ಆಯುಕ್ತರವರೆಗೆ ಯಾರಿಗೇ ಏನೇ ಆದರೂ ರಾಜೀವ್ ಗೌಡ ಕಾರಣ. ಸರ್ಕಾರವು ಆತನನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಪ್ರಕರಣ ದಾಖಲಿಸಬೇಕು. ಮೂರು ದಿನಗಳಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸುತ್ತೇವೆ’ ಎಂದರು.

ಗೌರಿಬಿದನೂರು, ಚಿಕ್ಕಬಳ್ಳಾಪುರ ನಗರಸಭೆ ಮುಂಭಾಗದಲ್ಲಿಯೂ ಪ್ರತಿಭಟನೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.