ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನವಮಿ: ಪೂಜೆ, ಪಾನಕ ವಿತರಣೆ ನಿಷೇಧ

Last Updated 2 ಏಪ್ರಿಲ್ 2020, 9:12 IST
ಅಕ್ಷರ ಗಾತ್ರ

ಚಿಂತಾಮಣಿ: ನಗರ ಹಾಗೂ ತಾಲ್ಲೂಕಿನಾದ್ಯಂತ 144ನೇ ಸೆಕ್ಷನ್ ಜಾರಿಯಲ್ಲಿರುವುದರಿಂದ ಏಪ್ರಿಲ್ 2ರಂದು ಗುರುವಾರ ರಾಮನವಮಿಯಂದು ದೇವಾಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೂಜೆ, ಪಾನಕ, ಫಲಹಾರ ವಿತರಿಸು
ವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಜನರು ಮನೆಗಳಿಂದ ಹೊರಬರಬಾರದು, ಗುಂಪು ಸೇರಬಾರದು ಎಂದು ಆದೇಶ ಹೊರಡಿಸಲಾಗಿದೆ. ಗುಂಪು ಸೇರುವುದರಿಂದ ಕೊರೊನಾ ಹರಡುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸಾಮಾಜಿಕ ಅಂತರ
ವನ್ನು ಕಾಪಾಡುವುದು ಸಾಧ್ಯವಾಗುವುದಿಲ್ಲ.

ಹಾಗಾಗಿ ಈ ವರ್ಷ ಯಾರು ಸಾರ್ವಜನಿಕವಾಗಿ ಪೂಜೆ, ಪಾನಕ, ಫಲಹಾರವನ್ನು ವಿತರಿಸಬಾರದು ಎಂದು ಮನವಿ ಮಾಡಲಾಗಿದೆ. ಮನವಿಯನ್ನು ಮೀರಿ ಯಾರಾದರೂ ನಡೆದುಕೊಂಡರೆ ಕಾನೂನಿನಂತೆ ಕ್ರಮಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT