ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾದಲಮ್ಮ ದೇವಿಯ ರಥೋತ್ಸವ

Last Updated 7 ಅಕ್ಟೋಬರ್ 2022, 7:11 IST
ಅಕ್ಷರ ಗಾತ್ರ

ಸಾದಲಿ: ವಿಜಯದಶಮಿ ಹಬ್ಬದ ಪ್ರಯುಕ್ತ ತಾಲ್ಲೂಕಿನ ಸಾದಲಿಯ ಸಾದಲಮ್ಮ ರಥೋತ್ಸವಕ್ಕೆ ಸಂಸದ ಎಸ್. ಮುನಿಸ್ವಾಮಿ ಅವರು ಚಾಲನೆ ನೀಡಿದರು.

ದೇವಿಯ ರಥೋತ್ಸವ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರ, ಅಭಿಷೇಕ, ಹೋಮ, ಹವನ ಮತ್ತಿತರರ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಮತ್ತು ಭಕ್ತಿಯಿಂದ ನಡೆದವು.

ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದ ಮುನಿಸ್ವಾಮಿ, ‘ಕ್ಷೇತ್ರದಲ್ಲಿ ಸಕಾಲದಲ್ಲಿ ಮಳೆ-ಬೆಳೆಯಾಗಿ ರೈತರು ಜನರು ಸಮೃದ್ಧಿಯಿಂದ ಜೀವನ ನಡೆಸುವಂತಾಗಲಿ’ ಎಂದು ಹಾರೈಸಿದರು.

ದೇವಾಲಯದ ಅಭಿವೃದ್ಧಿಗಾಗಿ ಈಗಾಗಲೇ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮಾದರಿ ಯಾತ್ರಾ ಸ್ಥಳವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ.ಸಾದಲಿಯಿಂದ ದಿಬ್ಬೂರಹಳ್ಳಿ ಮಾರ್ಗವಾಗಿ 11 ಕಿ. ಮೀ. ರಸ್ತೆಗೆ ರಾಷ್ಟ್ರೀಯ ರಸ್ತೆ ನಿಧಿಯಿಂದ 8 ಕೋಟಿ ಹಣ ಮಂಜೂರಾಗಿದ್ದು, ಹತ್ತು ದಿನಗಳೊಳಗೆ ಕೆಲಸ ಪ್ರಾರಂಭಿಸಲಾಗುತ್ತದೆ ಎಂದರು.

ಬೆಳಿಗ್ಗೆ 11.30 ಗಂಟೆಗೆ ಸ್ವಾಮಿಯ ಉತ್ಸವಮೂರ್ತಿಯನ್ನು ಮಂಗಳ ವಾದ್ಯದೊಂದಿಗೆ ಶಾಸ್ತ್ರೋಕ್ತವಾಗಿ ತಂದು ಅಲಂಕೃತ ರಥದಲ್ಲಿ ಇರಿಸಲಾಯಿತು. ವಿಶೇಷ ಪೂಜೆಯ ಬಳಿಕ ದೇವಸ್ಥಾನದ ಸಮಿತಿ ಪದಾಧಿಕಾರಿಗಳು ಮತ್ತು ತಾಲ್ಲೂಕು ದಂಡಾಧಿಕಾರಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು. ಸಹಸ್ರಾರು ಸಂಖ್ಯೆಯಲ್ಲಿ ನೆರದಿದ್ದ ಭಕ್ತರು ರಥ ಎಳೆಯಲು ಕೈ ಜೋಡಿಸಿದರು. ರಥಕ್ಕೆ ದವನ, ಬಾಳೆಹಣ್ಣು ಸಮರ್ಪಸಿದರು.

ಮಾಜಿ ಶಾಸಕ ರಾಜಣ್ಣ, ಕೆ.ಎಂ.ಎಫ್ ಉಪಾಧ್ಯಕ್ಷ ಮಂಜುನಾಥ್, ತಹಶೀಲ್ದಾರ್ ರಾಜೀವ್, ದಿಶಾ ಸದಸ್ಯ ಎಂ. ವೆಂಕಟೇಶ್, ದೇವರಾಜ್, ಆಂಜನೇಯ ಗೌಡ, ರೆಡ್ಡಿಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗೋವಿಂದರಾಜು, ತ್ಯಾಗರಾಜ್, ಹಾಲಿ ಅಧ್ಯಕ್ಷ ಅಶ್ವತ್ಥನಾರಾಯಣ, ತಿಪ್ಪಣ್ಣ, ಕೃಷ್ಣೇಗೌಡ,ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT