ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಹಸಿವು ನೀಗಿಸಲು ಸಿದ್ಧ

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಊಟ, ಆಹಾರ ಸಾಮಗ್ರಿ ಪೂರೈಕೆ
Last Updated 6 ಏಪ್ರಿಲ್ 2020, 15:03 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಸೋಮವಾರ ಜಿಲ್ಲೆಯ ಜನತೆಗಾಗಿ ಬೇಕಾದ ಅಗತ್ಯ ಆಹಾರ ಸಾಮಗ್ರಿಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಆರ್. ಲತಾ, ‘ವಿಮಾನ ನಿಲ್ದಾಣ ಪ್ರಾಧಿಕಾರವು ಜಿಲ್ಲೆಯಲ್ಲಿನ ಕೆಲ ಬಡಕುಟುಂಬಗಳಿಗೆ ಅವಶ್ಯವಿರುವ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಲು 1,000 ಕೆ.ಜಿ ಅಕ್ಕಿ, 500 ಕೆ.ಜಿ ಬೇಳೆ, 500 ಕೆ.ಜಿ ಗೋಧಿಹಿಟ್ಟು ಪೂರೈಸಿದೆ. ಇದು ಜಿಲ್ಲೆಯಲ್ಲಿರುವ ಬಡ ಜನರ ಹಸಿವು ನೀಗಿಸಲು ಸಹಕಾರಿಯಾಗುತ್ತದೆ’ ಎಂದು ತಿಳಿಸಿದರು.

‘ಪ್ರಾಧಿಕಾರದಿಂದ ಈಗಾಗಲೇ ಜಿಲ್ಲಾ ಮತ್ತು ತಾಲ್ಲೂಕು ಚೆಕ್‍ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಮತ್ತು ಜಿಲ್ಲಾಡಳಿತ ಭವನದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಹಾಗೂ ನಿರ್ಗತಿಕರಿಗೆ , ವಸತಿ ರಹಿತರಿಗೆ, ವಲಸೆ ಬಂದ ಕಾರ್ಮಿಕರಿಗೆ ಪ್ರತಿದಿನ ಮಧ್ಯಾಹ್ನ ಮತ್ತು ಸಂಜೆ ಸುಮಾರು 2,500 ಊಟ ಪೂರೈಸಲಾಗುತ್ತಿದೆ. ಮಂಗಳವಾರದಿಂದ 3,000 ಊಟ ಪೂರೈಕೆಯಾಗಲಿದೆ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎನ್.ಭಾಸ್ಕರ್, ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತ ಲೋಹಿತ್, ಗೌರಿಬಿದನೂರು ನಗರಸಭೆ ಆಯುಕ್ತ ಚಲಪತಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT