ಶುಕ್ರವಾರ, ಸೆಪ್ಟೆಂಬರ್ 17, 2021
29 °C

ಎಸ್ಸೆಸ್ಸೆಲ್ಸಿ: ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ಜಿಲ್ಲೆಯ 30 ವಿದ್ಯಾರ್ಥಿಗಳನ್ನು ಜಿಲ್ಲಾಡಳಿತದಿಂದ ಅಭಿನಂದಿಸಲಾಯಿತು. ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತವಾಯಿತು.

ಜಿಲ್ಲಾಧಿಕಾರಿ ಆರ್. ಲತಾ, ಕಳೆದ ಎರಡು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಉತ್ತಮ ಫಲಿತಾಂಶ ಪಡೆಯುತ್ತಿದೆ. ಇದು ಸಂತಸದ ವಿಷಯ ಎಂದು ಹೇಳಿದರು.

ಈ 30 ವಿದ್ಯಾರ್ಥಿಗಳಲ್ಲಿ ಅತಿಹೆಚ್ಚು ವಿದ್ಯಾರ್ಥಿಗಳು ಗ್ರಾಮೀಣ ಭಾಗದವರಾಗಿದ್ದಾರೆ. ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಮಾದರಿ ಮತ್ತು ಪ್ರೇರಣೆ ಆಗಿದೆ. ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಕಾಲಕಾಲಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ಸೂಚನೆಗಳನ್ನು ನೀಡಿತ್ತು. ಜಿಲ್ಲೆಯ ಎಲ್ಲ ಶಿಕ್ಷಕರಿಗೂ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು ಎಂದಿದ್ದಾರೆ. 

 ಪರೀಕ್ಷೆ ಬರೆದ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಶೇ 30.30 ರಷ್ಟು ವಿದ್ಯಾರ್ಥಿಗಳು ‘ಎ+’, ಶೇ 40.57ರಷ್ಟು ವಿದ್ಯಾರ್ಥಿಗಳು ‘ಎ’ ಮತ್ತು ಶೇ 27.39 ರಷ್ಟು ವಿದ್ಯಾರ್ಥಿಗಳು ‘ಬಿ’ ಹಾಗೂ ಶೇ 1.74 ರಷ್ಟು ವಿದ್ಯಾರ್ಥಿಗಳು ‘ಸಿ’ ಗ್ರೇಡ್ ಪಡೆದಿದ್ದಾರೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.