ಶನಿವಾರ, ಜನವರಿ 23, 2021
20 °C

ಕ್ಯಾಲೆಂಡರ್ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ ಹಾಗೂ ಕೊರೊನಾ ವಾರಿಯರ್ಸ್‌ 2021ರ ‘ಪ್ರಜಾವಾಣಿ’ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಸತ್ಯನಾರಾಯಣರೆಡ್ಡಿ ಮಾತನಾಡಿ, ಅನೇಕ ದಶಕಗಳಿಂದ ‘ಪ್ರಜಾವಾಣಿ’ಯು ನಾಡಿನ ಅತ್ಯಂತ ವಿಶ್ವಾಸಾರ್ಹ ಪತ್ರಿಕೆಯಾಗಿದೆ. ಸುದ್ದಿಸ್ವಾರಸ್ಯ, ಸಾಹಿತ್ಯಿಕ, ರಾಜಕೀಯ ಸೇರಿದಂತೆ ಹೋಬಳಿಮಟ್ಟದಿಂದ ಹಿಡಿದು ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳು ಪತ್ರಿಕೆಯಲ್ಲಿ ಪ್ರಕಟವಾಗುತ್ತಿವೆ
ಎಂದರು.

ಇಂದಿಗೂ ಅದೇ ಮೌಲ್ಯ ಹಾಗೂ ಗುಣಮಟ್ಟ ಕಾಪಾಡಿಕೊಂಡು ಬಂದಿದೆ. ಗ್ರಾಮೀಣರ ಸಮಸ್ಯೆಗಳ ಬಗ್ಗೆ ಸುದ್ದಿಗಳು ಪ್ರಕಟವಾಗುತ್ತಿವೆ ಎಂದರು.

‌ಕೊರೊನಾ ವಾರಿಯರ್ಸ್‌ಗಳಾದ ಆಸ್ಪತ್ರೆಯ ಹಿರಿಯ ಆರೋಗ್ಯ ಸಹಾಯಕ ಸುಬಾನ್ ಸಾಬ್, ಹಿರಿಯ ತಂತ್ರಜ್ಞ ವೆಂಕಟೇಶ್, ಶುಶ್ರೂಷಕಿಯರಾದ ಮುಶ್ರ ಹಾಗೂ ಅಶ್ವಿನಿ ಅವರು ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.