ಚಿಕ್ಕಬಳ್ಳಾಪುರ: ಇಲ್ಲಿನ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ ಗಣ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪೊಲೀಸ್, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಶಾಲೆಗಳ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.

ಚಿಕ್ಕಬಳ್ಳಾಪುರ ದಲ್ಲಿ ಶೀಘ್ರದಲ್ಲಿ ಹೂ ಮಾರುಕಟ್ಟೆಗೆ ಟೆಂಡರ್ ಆಗಲಿದೆ. ಜಿಲ್ಲೆಯ ವೈದ್ಯಕೀಯ ಕಾಲೇಜಿನ ಕಾಮಗಾರಿಗೆ ನಮ್ಮ ಸರ್ಕಾರ ₹ 375 ಕೋಟಿಗಿಂತ ಹೆಚ್ಚು ಹಣ ಬಿಡುಗಡೆ ಮಾಡಿದೆ ಎಂದು ಸಚಿವರು ಹೇಳಿದರು.

ನಂದಿ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣಕ್ಕೆ ಎದುರಾಗಿದ್ದ ಸಮಸ್ಯೆಗಳನ್ನು ಪರಿಸಿದ್ದೇವೆ. ಒಂದೂವರೆ ವರ್ಷದ ಒಳಗೆ ನಂದಿ ಬೆಟ್ಟ ಕ್ಕೆ ರೋಪ್ ವೇ ನಿರ್ಮಾಣ ಆಗಲಿದೆ ಎಂದರು.

ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪ್ರಭು ಜಿ.,ಜಿ.ಪಂ ಸಿಇಒ ಡಾ.ನವೀನ್ ಭಟ್, ಎಸ್ಪಿ ಕುಶಾಲ್ ಚೌಕ್ಸೆ, ಮಾವು ನಿಗಮದ ಅಧ್ಯಕ್ಷ ಮುದ್ದು ಗಂಗಾಧರ್ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.