ಚಿಂತಾಮಣಿ: ‘ಕೋವಿಡ್-19 ಕಾರ್ಯನಿರ್ವಹಣೆಯ ಸಂದರ್ಭದಲ್ಲಿ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ಸರ್ಕಾರದ ಆದೇಶದಂತೆ ₹30 ಲಕ್ಷ ಪರಿಹಾರ ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗವು ಸೋಮವಾರ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿತು.

‘ಜಿಲ್ಲಾಧಿಕಾರಿಯವರ ಆದೇಶದಂತೆ ಕೋವಿಡ್ ಆರಂಭದ ದಿನಗಳಿಂದಲೂ ಹೆಚ್ಚಿನ ಸಂಖ್ಯೆಯ ಶಿಕ್ಷಕರು ಕೋವಿಡ್ ಸಮೀಕ್ಷೆಯಲ್ಲಿ ನಿರತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಗರ ಭಾಗದಲ್ಲಿ ವಾರ್ಡ್ ಹಾಗೂ ಗ್ರಾಮೀಣ ಭಾಗಗಳಲ್ಲಿ ಗ್ರಾಮ ಟಾಸ್ಕ್ ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆ ಮನೆಗೂ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

‘ಸೋಂಕಿತರಾಗಿ ಮನೆಯಲ್ಲಿಯೇ ಐಸೋಲೇಷನ್‌ನಲ್ಲಿ ಇರುವವರ ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ಪರೀಕ್ಷೆ ಮಾಡುತ್ತಾರೆ. ಸೋಂಕಿತರನ್ನು ನೇರವಾಗಿ ಭೇಟಿ ಮಾಡಿ ಉಷ್ಣಾಂಶ, ಆಮ್ಲಜನಕ ಪ್ರಮಾಣವನ್ನು ಚೆಕ್ ಮಾಡುತ್ತಾರೆ. ಹೀಗಾಗಿ ಅನೇಕ ಶಿಕ್ಷಕರು ಕೋವಿಡ್ ಸೋಂಕಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಕುಟುಂಬಗಳು ಅನಾಥವಾಗಿವೆ’ ಎಂದಿದ್ದಾರೆ.

ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಮನವಿಯನ್ನು ಸ್ವೀಕರಿಸಿ, ಸರ್ಕಾರಿ ಆದೇಶದಂತೆ ಕ್ರಮಕೈಗೊಳ್ಳ
ಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಅಶೋಕಕುಮಾರ್ ತಿಳಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಉಪಾಧ್ಯಕ್ಷ ಡಿ.ಲಿಂಗಪ್ಪ, ಖಜಾಂಚಿ ಪಿಳ್ಳಣ್ಣ, ಸಹ ಕಾರ್ಯದರ್ಶಿ ಸಂಜೀವರಾಯಪ್ಪ ನಿಯೋಗದಲ್ಲಿ ಇದ್ದರು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.