ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಆಗ್ರಹ

Last Updated 27 ಆಗಸ್ಟ್ 2021, 2:59 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ವಿದ್ಯಾರ್ಥಿನಿ ವಿರುದ್ಧವೇ ಹೇಳಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜನವಾದಿ ಮಹಿಳಾ ಸಂಘಟನೆಯ ತಾಲ್ಲೂಕು ಅಧ್ಯಕ್ಷೆ ಬಿ. ಸಾವಿತ್ರಮ್ಮ ಒತ್ತಾಯಿಸಿದ್ದಾರೆ.

ಮಂಗಳವಾರ ರಾತ್ರಿ ವಿದ್ಯಾರ್ಥಿನಿ ಮೇಲೆ 6 ಮಂದಿ ಸಾಮೂಹಿಕ ಅತ್ಯಾಚಾರ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಈ ಪ್ರಕರಣದಿಂದ ಮೈಸೂರು ಸೇರಿದಂತೆ ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ. ವಿದ್ಯಾರ್ಥಿನಿಯ ಜೊತೆಗೆ ಇರುವ ಯುವಕನನ್ನು ದುಷ್ಕರ್ಮಿಗಳು ಥಳಿಸಿದ್ದಾರೆ. ಘಟನೆ ನಡೆದು ಹಲವು ಗಂಟೆಗಳು ಕಳೆದರೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ ಎಂದು ದೂರಿದ್ದಾರೆ.

ಪೊಲೀಸ್ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT