ಶುಲ್ಕ ಪಾವತಿಗೆ ಕಿರುಕುಳ; ಕ್ರಮಕ್ಕೆ ಮನವಿ

ಚಿಕ್ಕಬಳ್ಳಾಪುರ: ಶಾಲಾ ಶುಲ್ಕ ಪಾವತಿಸುವಂತೆ ಶಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ. ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಮಾನವ ಹಕ್ಕುಗಳ ಜಾಗೃತಿ ಸಮಿತಿ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಶನಿವಾರ ಮನವಿ ಸಲ್ಲಿಸಿದರು.
ಕೋವಿಡ್ ಬಂದು ವರ್ಷವಾಗಿದೆ. ಕೆಲಸವಿಲ್ಲದೆ ಪರಿತಪಿಸುತ್ತಿದ್ದ ವಿದ್ಯಾರ್ಥಿಗಳ ಪೋಷಕರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಮಕ್ಕಳ ಪೋಷಣೆಗೂ ಕಷ್ಟಪಡುತ್ತಿದ್ದಾರೆ. ಈ ಸಮಯದಲ್ಲಿ ಶಿಕ್ಷಣ ಸಚಿವರು ಖಾಸಗಿ ಶಾಲಾ ಶುಲ್ಕವನ್ನು ಶೇಕಡ 70ರಷ್ಟು ನಿಗದಿಗೊಳಿಸಿದ್ದಾರೆ. ಇಂತಹದ್ದರ ನಡುವೆ ಕಡ್ಡಾಯವಾಗಿ ಶುಲ್ಕ ಪಾವತಿಸಬೇಕು ಎಂದು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿವೆ ಎಂದು ಸಮಿತಿ ಪದಾಧಿಕಾರಿಗಳು ದೂರಿದ್ದಾರೆ.
ಹೀಗೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗುವ ಸಂಭವ ಇರುತ್ತದೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ. ಆದ್ದರಿಂದ ಖಾಸಗಿ ಖಾಲೆಗಳು ಒತ್ತಾಯವಾಗಿ ಶುಲ್ಕ ವಸೂಲಿ ಮಾಡಬಾರದು ಎಂದು ನೋಟಿಸ್ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಸಮಿತಿ ನಗರ ಘಟಕದ ಅಧ್ಯಕ್ಷ ಕೆ.ಎನ್. ಸುಧಾಕರ್ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.