ಶನಿವಾರ, ನವೆಂಬರ್ 28, 2020
25 °C
ನ. 11ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ

ಸೇವಾ ಭದ್ರತೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ: ಜಿಲ್ಲೆಯ ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರ ಸೇವಾ ಭದ್ರತೆಗೆ ಆಗ್ರಹಿಸಿ ನ. 11ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

‘ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಮಾರ್ಚ್‌ನಿಂದ ನವೆಂಬರ್‌ವರೆಗಿನ ಬಾಕಿ ವೇತನ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ವಿದ್ಯಾರ್ಥಿನಿಲಯಗಳ ಹಾಗೂ ವಸತಿಶಾಲೆಗಳ ಹೊರಗುತ್ತಿಗೆ ನೌಕರರ ಸಂಘದ(ಸಿಐಟಿಯು) ಜಿಲ್ಲಾ ಸಮಿತಿ ನೇತೃತ್ವದಡಿ ಧರಣಿ ನಡೆಯಲಿದೆ’ ಎಂದು ಸಂಘದ ಅಧ್ಯಕ್ಷ ಬಿ. ಆಂಜನೇಯರೆಡ್ಡಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸರ್ಕಾರಿ ವಿದ್ಯಾರ್ಥಿನಿಲಯ ಮತ್ತು ವಸತಿಶಾಲೆಗಳಲ್ಲಿ 20 ವರ್ಷಗಳಿಂದ ಹೊರಗುತ್ತಿಗೆ ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. 10 ವರ್ಷ ಮೇಲ್ಪಟ್ಟ ದಿನಗೂಲಿಗಳಾಗಿ ಕೆಲಸ ಮಾಡಿರುವ ನೌಕರರನ್ನು ಏಕಾಏಕಿ ಹೊರಗುತ್ತಿಗೆ ನೌಕರರಾಗಿ ಪರಿವರ್ತನೆ ಮಾಡಿರುವುದು ಖಂಡನೀಯ ಎಂದರು.

ಸಂಘದ ಜಿಲ್ಲಾ ಕಾರ್ಯದರ್ಶಿ ಕೆ. ಮುನಿಯಪ್ಪ ಮಾತನಾಡಿ, ಹೊರಗುತ್ತಿಗೆ ನೌಕರರಿಗೆ ಆಹಾರಧಾನ್ಯ ವಿತರಿಸಬೇಕು. ಭವಿಷ್ಯ ನಿಧಿ ಹಣವನ್ನು ನೌಕರರ ಖಾತೆಗೆ ಜಮೆ ಮಾಡಿರುವ ಬಗ್ಗೆ ದಾಖಲೆಗಳಿಲ್ಲ. ಕೂಡಲೇ ಪಿಎಫ್ ಹಣ ಪಾವತಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಜಿ. ಮುಸ್ತಾಫ, ಪದಾಧಿಕಾರಿಗಳಾದ ನಾರಾಯಣನಾಯಕ್, ಶಿವಪ್ಪ, ಬಿ.ಎನ್. ವೆಂಕಟರವಣಪ್ಪ, ಶಿಡ್ಲಘಟ್ಟದ ಭಾಗ್ಯಮ್ಮ, ಕದಿರಪ್ಪ, ನವೀನ್, ಸುನಿತಮ್ಮ, ಗುಡಿಬಂಡೆಯ ವೈ.ಜಿ. ನರಸಿಂಹಪ್ಪ, ರಂಗಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.