ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಪ್ಲಾಸ್ಟಿಕ್ ಬಳಕೆ ವಿರುದ್ಧ ಕ್ರಮಕ್ಕೆ ಮನವಿ

Last Updated 22 ಅಕ್ಟೋಬರ್ 2021, 6:54 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಹೋಟೆಲ್‌ಗಳು, ಟೀ ಅಂಗಡಿಗಳು ಹಾಗೂ ಬೀದಿಬದಿ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದು ಈ ಬಗ್ಗೆ ಕಠಿಣ ಕ್ರಮಕೈಗೊಳ್ಳುವಂತೆ ಕನ್ನಡ ಸೇನೆ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಸರ್ಕಾರ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದೆ. ಹೀಗಿದ್ದರೂ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಲ್ಲಿ ಹೋಟೆಲ್‌ಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಆಗುತ್ತಿದೆ. ಬೀದಿ ಬದಿ ವ್ಯಾಪಾರಿಗಳು ಸಹ ಗ್ರಾಹಕರಿಗೆ ಇವುಗಳನ್ನು ನೀಡುತ್ತಿದ್ದಾರೆ. ಈ ಹಿಂದೆ ಜಿಲ್ಲಾಡಳಿತ ಹಲವು ಬಾರಿ ದಂಡ ವಿಧಿಸಿದೆ. ಹೀಗಿದ್ದರೂ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣ ಸಾಧ್ಯವಾಗಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ನಗರಗಳ ಆರೋಗ್ಯವು ಹದಗೆಡುತ್ತಿದೆ. ಈ ಬಗ್ಗೆ ಕಠಿಣ ಕ್ರಮವನ್ನು ಜಿಲ್ಲಾಡಳಿತ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಪದಾಧಿಕಾರಿಗಳಾದ ಎನ್.ರಘುಪತಿ, ಎಂ.ಎಂ.ಅಂಬರೀಷ್, ಜಿ.ವಿ.ಮುರುಳಿ, ಸಿ.ಎ.ಅರವಿಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT