ಗುರುವಾರ , ಮಾರ್ಚ್ 30, 2023
32 °C

ಅಂಬೇಡ್ಕರ್ ಭವನ ಜಾಗಕಾಯ್ದಿರಿಸಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಜಿಲ್ಲಾ ಮಟ್ಟದಲ್ಲಿ ಸುಸಜ್ಜಿತವಾದ ಬಿ. ಆರ್. ಅಂಬೇಡ್ಕರ್ ಭವನವನ್ನು ಜಿಲ್ಲಾ ಕೇಂದ್ರದಲ್ಲಿ ನಿರ್ಮಿಸಲು 5 ಎಕರೆ ಜಾಗವನ್ನು ಕಾಯ್ದಿರಿಸಬೇಕು. ಆ ಕಟ್ಟಡದಲ್ಲಿ ಸಭಾಂಗಣ, ಇ-ಗ್ರಂಥಾಲಯ, ಫೋಟೊ ಗ್ಯಾಲರಿ, ಬಿ. ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರವನ್ನು ಅಭಿವೃದ್ಧಿಪಡಿಸಬೇಕು ಎಂದು ಕೋರಿ ಅಖಿಲ ಭಾರತೀಯ ಪರಿಶಿಷ್ಟ ಜಾತಿ ಯುವಜನ ಸಮಾಜದ ಜಿಲ್ಲಾ ಘಟಕ ಹಾಗೂ ಜನಪದವಾಗಲಿ ಸಂವಿಧಾನ ಅಭಿಯಾನ ವೇದಿಕೆಯ ಸದಸ್ಯರು ಇತ್ತೀಚೆಗೆ ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಡದ ಜನಸಂಖ್ಯೆ ಗಣನೀಯವಾಗಿದೆ. ಇದು ಸರ್ಕಾರದ ಅಂಕಿ ಅಂಶಗಳಿಂದಲೇ ಸ್ಪಷ್ಟವಾಗುತ್ತದೆ. ಹೀಗಿದ್ದರೂ ಸುಸಜ್ಜಿತ ಅಂಬೇಡ್ಕರ್ ಭವನವಿಲ್ಲ. ₹ 15 ಕೋಟಿ ವೆಚ್ಚದಲ್ಲಿ ಭವನವನ್ನು ನಿರ್ಮಿಸಬೇಕು. ಪರಿಶಿಷ್ಟ ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ವಿವಿಧ ಆಯಾಮಗಳ ಅಭಿವೃದ್ಧಿಗೆ ಭವನವು ಪೂರಕವಾಗಬೇಕು ಎಂದು ಸಂಘಟನೆ ಸದಸ್ಯರು ಕೋರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು