ಬುಧವಾರ, ಆಗಸ್ಟ್ 10, 2022
20 °C
ರೈತ ಸಂಘ, ಹಸಿರುಸೇನೆಯಿಂದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ

ರೈತರಿಗೆ ಪರಿಹಾರ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ರೈತರು ಬೆಳೆದ ಕೃಷಿ ಹಾಗೂ ತರಕಾರಿ ಬೆಳೆಗಳಿಗೆ ಸರ್ಕಾರ ವೈಜ್ಞಾನಿಕ ಬೆಂಬಲ ಬೆಲೆ ಹಾಗೂ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಮುಖಂಡರು ಬುಧವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟಿಸಿದರು.

ರಾಜ್ಯ ಹಸಿರು ಸೇನೆ ಸಂಚಾಲಕ ಲಕ್ಷ್ಮಣರೆಡ್ಡಿ ಮಾತನಾಡಿ, ಲಾಕ್‌ಡೌನ್ ಕಾರಣದಿಂದ ರೈತರು
ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಆಗದೇ ರೈತರಿಗೆ ಲಕ್ಷಾಂತರ ರುಪಾಯಿ ನಷ್ಟ ಆಗಿದೆ. ಒಂದಡೆ ಬೆಳೆಗಳಿಗೆ ಸರ್ಕಾರ ಅವೈಜ್ಞಾನಿಕ ರೀತಿಯಲ್ಲಿ ಬೆಂಬಲ ಬೆಲೆ ನಿಗದಿಪಡಿಸಿದೆ. ಇದರಿಂದ ರೈತರಿಗೆ ಅನುಕೂಲ ಆಗುವುದಿಲ್ಲ. ಸರ್ಕಾರ ತೋಟಗಾರಿಕೆ, ಕೃಷಿ ಇಲಾಖೆಗಳಿಂದ ಸಮೀಕ್ಷೆ ಮಾಡಿಸಬೇಕು. ತಾಲ್ಲೂಕಿನಲ್ಲಿ ಕೃಷಿ, ತರಕಾರಿ ಬೆಳೆ ನಷ್ಟ ಹೊಂದಿದ ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘ ಹಾಗೂ ಹಸಿರುಸೇನೆ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಟಿ.ರಘುನಾಥರೆಡ್ಡಿ, ತಾಲ್ಲೂಕು ಉಪಾಧ್ಯಕ್ಷ ರಮಣ, ತಾಲ್ಲೂಕು ಮಹಿಳಾ ಸಂಚಾಲಕಿ ಟಿ.ಆರ್.ಪ್ರಮೀಳಾ, ಬಿ.ಎಂ.ಬಯ್ಯಾರೆಡ್ಡಿ, ಶ್ರೀನಿವಾಸ್, ನಾರಾಯಣಸ್ವಾಮಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.