ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ | ವಸತಿ ಶಾಲೆ: ವಿಶೇಷ ವರ್ಗದ ಮಕ್ಕಳಿಗೆ ನೇರ ಪ್ರವೇಶ

Published 7 ಮೇ 2024, 13:42 IST
Last Updated 7 ಮೇ 2024, 13:42 IST
ಅಕ್ಷರ ಗಾತ್ರ

ಚಿಂತಾಮಣಿ: ಪ್ರವೇಶ ಪರೀಕ್ಷೆ ಇಲ್ಲದೆ ವಿಶೇಷ ವರ್ಗದ ಮಕ್ಕಳಿಗೆ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅಲೆಮಾರಿ/ಅರೆ ಅಲೆಮಾರಿ, ಪೌರಕಾರ್ಮಿಕ, ಮಾಜಿ ದೇವದಾಸಿಯರ ಮಕ್ಕಳು ಮತ್ತು ಮೊಮ್ಮಕ್ಕಳು, ಎಚ್‌ಐವಿ ಪೀಡಿರ ಮಕ್ಕಳು, ಅನಾಥ ಮಕ್ಕಳು, ಸಪಾಯಿ ಕರ್ಮಚಾರಿಗಳು, ಅಂಗವಿಕಲರು, ವಿಧವೆಯರು, ಯೋಜನಾ ನಿರಾಶ್ರಿತರು, ಮಾಜಿ ಸೈನಿಕರ ಮಕ್ಕಳು, ಗಿರಿಜನ ವಸತಿಶಾಲೆ, ಆಶ್ರಮ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಪ್ರವೇಶ ಪರೀಕ್ಷೆ ಇಲ್ಲದೆ ನೇರವಾಗಿ ಮುರಾರ್ಜಿ ದೇಸಾಯಿ ವಸತಿ ಶಾಲೆ, ಅಂಬೇಡ್ಕರ್ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಇಂದಿರಾಗಾಂಧಿ, ನಾರಾಯಣಗುರು, ಏಕಲವ್ಯ ಮಾದರಿ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ.

2024-25ನೇ ಸಾಲಿನ 6ನೇ ತರಗತಿಗೆ ಮೇ 15 ರಿಂದ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಐದನೇ ತರಗತಿ ಉತೀರ್ಣರಾದ ವಿಶೇಷ ವರ್ಗದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು. ವಿದ್ಯಾರ್ಥಿಯ ಆಧಾರ್ ಸಂಖ್ಯೆ, ಪಾಲಕರ ಮೊಬೈಲ್ ಸಂಖ್ಯೆ ವಿಶೇಷ ವರ್ಗದ ದಾಖಲಾತಿಗಾಗಿ ಸಂಬಂಧಿಸಿದ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ವಸತಿ ಶಾಲೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT