ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ವಾಸ್ತವ್ಯ: ಜರಬಂಡಹಳ್ಳಿಯಲ್ಲಿ ಸಚಿವ ಆರ್‌.ಅಶೋಕಗೆ ಅದ್ದೂರಿ ಸ್ವಾಗತ

Last Updated 26 ನವೆಂಬರ್ 2022, 7:34 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿಯಲ್ಲಿ ಗ್ರಾಮ ವಾಸ್ತವ್ಯಕ್ಕೆ ಬಂದಿರುವ ಆರ್.ಅಶೋಕ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು.‌

ನುಲುಗುಮ್ಮನಹಳ್ಳಿ ಗ್ರಾಮದ ಆರಂಭದಿಂದ ಲಕ್ಷ್ಮಿ ವೆಂಕಟರಮಣಸ್ವಾಮಿ ದೇಗುಲದವರೆಗೆ ವಾಹನದಲ್ಲಿ ಮೆರವಣಿಯಲ್ಲಿ ಕರೆತರಲಾಯಿತು. ಕ್ರೇನ್ ಮೂಲಕ ಗ್ರಾಮಸ್ಥರು ಹೂವಿನ ಹಾರ ಹಾಕಿದರು. ವೆಂಕಟರಮಣ ಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಸಚಿವರು ಜನಬಂಡಹಳ್ಳಿಯತ್ತ ಸಾಗಿದರು.

ಗ್ರಾಮಕ್ಕೆ ಬಂದ ಸಚಿವರನ್ನು ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು. ವೀರಗಾಸೆ, ಡೊಳ್ಳುಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆ ಮೆರುಗು ತುಂಬಿದ್ದವು.

ಸಚಿವರಾದ ಡಾ.ಕೆ.ಸುಧಾಕರ್ ಮತ್ತು ಎಂಟಿಬಿ ನಾಗರಾಜ್ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ. ದಾರಿಯುದ್ದಕ್ಕೂ ಸಚಿವರ ಕಟೌಟ್ ಗಳು ರಾರಾಜಿಸುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT