ಬಾಗೇಪಲ್ಲಿ: ಪಟ್ಟಣದ ಕೊತ್ತಪಲ್ಲಿ ರಸ್ತೆಯನ್ನು ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಸಾರಥ್ಯದ ಬಣದ ಮುಖಂಡರು ಮಂಗಳವಾರ ಸಂಜೆ ಮಳೆ ರಸ್ತೆ ಗುಂಡಿಯಲ್ಲಿ ಪೈರು ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಸಂಘಟನೆ ತಾಲ್ಲೂಕು ಅಧ್ಯಕ್ಷ ಬಿ.ಎ.ಬಾಬಾಜಾನ್ ಮಾತನಾಡಿ, ಪಟ್ಟಣದ ಡಿವಿಜಿ ಮುಖ್ಯರಸ್ತೆಯಿಂದ ಕೊತ್ತಪಲ್ಲಿ ಗ್ರಾಮದ ರಸ್ತೆ ತೀರಾ ಹದಗೆಟ್ಟಿದೆ. ಅನೇಕ ವರ್ಷಗಳಿಂದ ರಸ್ತೆ ಡಾಂಬರೀಕರಣ ಮಾಡಿಲ್ಲ. ಇದೇ ರಸ್ತೆಯಲ್ಲಿ ಶಾಲೆಗಳ ಮಕ್ಕಳು ಸಂಚರಿಸುತ್ತಾರೆ. ಮಳೆ, ಚರಂಡಿ ನೀರು ರಸ್ತೆಗೆ ಹರಿಯುತ್ತಿದೆ. ಜನರ ಹಾಗೂ ವಾಹನ ಸಂಚಾರಕ್ಕೆ ತೊಂದರೆ ಆಗಿದೆ. ಕೂಡಲೇ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸಿ ರಸ್ತೆ ಡಾಂಬರೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಚರಂಡಿಗಳನ್ನು ಸಮರ್ಪಕವಾಗಿ ಸ್ವಚ್ಛತೆ ಮಾಡಿಲ್ಲ. ರಸ್ತೆಗಳಲ್ಲಿ ಮನಬಂದಂತೆ ರಸ್ತೆಉಬ್ಬು ಹಾಕಿದ್ದಾರೆ. ಗುಂಡಿ ತಪ್ಪಿಸಲು ಹೋಗಿ ವಾಹನ ಸವಾರರು ಬಿದ್ದು ಗಾಯ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಷೇಕ್ ಹಿದಾಯುತುಲ್ಲಾ, ವೆಂಕಟಶಿವಪ್ಪ, ರಿಯಾಜ್ಅಹಮದ್, ಸಲೀಂ, ಮಂಜುನಾಥ್, ಇದ್ರೀಸ್ವುಲ್ಲಾ, ಸುಹೇಲ್, ವಿಷ್ಣು, ಮುಬಾರಕ್, ಫಕೃದ್ಧೀನ್, ಸಾದಿಕ್, ಮಧುಸೂದನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.