ಚಿಕ್ಕಬಳ್ಳಾಪುರ: ಹೋಬಳಿ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಸ್ತೆ ಸುರಕ್ಷತಾ ಮಾಸ ಅರಿವು ಕಾರ್ಯಕ್ರಮವನ್ನು ಜ.30 ರವರೆಗೆ ಜಿಲ್ಲಾದ್ಯಂತ ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಪಿ. ರಾಮಲಿಂಗೇಗೌಡ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾ’ಕ್ಕೆ ಚಾಲನೆ ನೀಡಿ ಮಾತನಾಡಿದರು.

ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಂದ ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆಯಾಗುತ್ತಿದೆ. ರಸ್ತೆ ಅಪಘಾತಗಳನ್ನು ತಡೆಯಲು ಸಂಚಾರ ನಿಯಮಗಳನ್ನು ಪಾಲಿಸುವ ಜೊತೆಗೆ ಜಾಗರೂಕತೆಯ ವಾಹನ ಚಾಲನೆ ಅತ್ಯಗತ್ಯ. ಅದರಲ್ಲೂ ದ್ವಿಚಕ್ರವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು ಎಂದು ಸಲಹೆ ನೀಡಿದರು.

ವರ್ಷದಿಂದ ವರ್ಷಕ್ಕೆ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಅಪಘಾತಗಳಲ್ಲಿನ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಈ ರೀತಿಯ ಸಾವುಗಳಲ್ಲಿ ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಚಾಲನೆಯೂ ಪ್ರಮುಖ ಕಾರಣವಾಗಿದೆ. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದಲ್ಲಿ ಅಪಘಾತಗಳನ್ನು ತಪ್ಪಿಸಬಹುದು ಎಂದು ಹೇಳಿದರು.

ಕೆಲವು ವಾಹನ ಸವಾರರ ಅಜಾಗರೂಕತೆ ಮತ್ತು ಬೇಜವಾಬ್ದಾರಿ ಚಾಲನೆಯ ಕಾರಣದಿಂದ ಸಂಚಾರ ನಿಯಮಗಳನ್ನು ಪಾಲಿಸುತ್ತಿಲ್ಲ. ಯಾರದ್ದೋ ನಿರ್ಲಕ್ಷ್ಯ ಮತ್ತು ತಪ್ಪಿಗೆ ಮತ್ತಾರೋ ಬಲಿ ಆಗುವ ಹಾಗೂ ಅವರ ಕುಟುಂಬಗಳು ವಿನಾಕಾರಣ ಬೀದಿಗೆ ಬರುವಂತಾಗುತ್ತಿದೆ ಎಂದರು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಸಂಚಾರ ನಿಯಮ, ಅಪಘಾತಗಳ ಸಾವು ನೋವುಗಳು ಹಾಗೂ ಸುರಕ್ಷಿತ ಮತ್ತು ಜವಾಬ್ದಾರಿಯುತ ವಾಹನ ಚಾಲನೆ ಮಾಡುವ ಬಗ್ಗೆ ಒಂದು ತಿಂಗಳು ಜಾಗೃತಿ ಮೂಡಿಸಲಾಗುವುದು. ಜ.31 ರಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ರಸ್ತೆ ಸುರಕ್ಷತೆಗೆ ಆದ್ಯತೆ ನೀಡಿ ಅಪಘಾತಗಳನ್ನು ನಿಯಂತ್ರಿಸುವ ಉಪಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಬದ್ಧವಾಗಿದೆ. ದ್ವಿಚಕ್ರ ಸವಾರರು ಹೆಲ್ಮೆಟ್ ಹಾಗೂ ಲಘು ವಾಹನಗಳ ಚಾಲಕರು ಸೀಟ್ ಬೆಲ್ಟ್ ಧರಿಸಿ ಪ್ರಯಾಣ ಮಾಡಿದರೆ ಶೇ 90ರಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದು ಸಲಹೆ ನೀಡಿದರು.

ರಸ್ತೆ ಅಪಘಾತಗಳನ್ನು ಅವಲೋಕಿಸಿದರೆ ವೈಫಲ್ಯ ಎದ್ದು ಕಾಣುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗೃತರಾಗಬೇಕು. ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ ಈ ತಿಂಗಳ ಅಂತ್ಯದವರೆಗೆ ನಡೆಯಲಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮಾತನಾಡಿ, ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದಿರುವುದು ಅಪಘಾತಗಳಿಗೆ ಕಾರಣವಾಗುತ್ತಿವೆ. ರಸ್ತೆ ನಿಯಮಗಳನ್ನು ಪಾಲಿಸಲು ನಾವೆಲ್ಲರೂ ಪಣತೊಡಬೇಕಿದೆ. ಹೆಲೈಟ್, ಸೀಟ್ ಬೆಲ್ಟ್ ಕಡ್ಡಾಯವಾಗಿ ಧರಿಸಬೇಕು. ಅಪಘಾತಗಳ ಸಂದರ್ಭದಲ್ಲಿ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸುವ ಕಾರಣದಿಂದ ಜೀವ ಉಳಿದ ಬೇಕಾದಷ್ಟು ಉದಾಹರಣೆಗಳಿವೆ ಎಂದು ಹೇಳಿದರು.

ಜಾಥಾ ಜಿಲ್ಲಾ ನ್ಯಾಯಾಲಯದ ಮುಂಭಾಗದಿಂದ ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ಸಾಗಿತು. ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಯಿತು.

ಕಲಾವಿದ ಸೋ.ಸು ನಾಗೇಂದ್ರನಾಥ್ ಯಮನ ಪಾತ್ರದಲ್ಲಿ, ಗಾಯಕ ಕಲಾವಿದ ಮಂಚನಬಲೆ ಶ್ರೀನಿವಾಸ್ ಚಿತ್ರಗುಪ್ತನ ವೇಷ ಧರಿಸಿ ಪಾತ್ರಾಭಿನಯದ ಮೂಲಕ ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳ ಪಾಲನೆಯ ಬಗ್ಗೆ ಅರಿವು ಮೂಡಿಸಿದರು.

ಈ ವೇಳೆ ಶಿರಸ್ತ್ರಾಣ ಧರಿಸದೆ ಸಂಚಾರ ಮಾಡುತ್ತಿದ್ದವರನ್ನು ತಡೆದು ಪೊಲೀಸ್ ಸಿಬ್ಬಂದಿಗಳ ಸಹಕಾರ ಪಡೆದು ನಿಯಮ ಉಲ್ಲಂಘನೆ ಮಾಡಿದವರಿಂದ ದಂಡ ಪಾವತಿಸುವಂತೆ ಮಾಡಿದ್ದು ಸಾರ್ವಜನಿಕರ ಮೆಚ್ಚುಗೆ ಪಡೆಯಿತು.

ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪಾ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗನಾಥ್ ರೈ, ತಹಶೀಲ್ದಾರ್ ರಶ್ಮಿ, ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಕೆ.ವಿ ಅಭಿಲಾಷ್ ಮತ್ತಿತರರು ಪಾಲ್ಗೊಂಡಿದ್ದರು.

ಸಂಚಾರ ನಿಯಮ ಪಾಲನೆ; ಸಾವಿಗೆ ಕಡಿವಾಣ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಮಾತನಾಡಿ ವಾಹನ ಸವಾರರು ಕಡ್ಡಾಯವಾಗಿ ಸಂಚಾರ ನಿಯಮಗಳ ಪಾಲಿಸಬೇಕು. ಸುರಕ್ಷಿತ ಚಾಲನೆಗೆ ಒತ್ತು ನೀಡುವ ಮೂಲಕ ಅಪಘಾತಗಳು ಮತ್ತು ಅವುಗಳ ಮೂಲಕ ಆಗುತ್ತಿರುವ ಸಾವುಗಳಿಗೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.