ಚಿಕ್ಕಬಳ್ಳಾಪುರ: ಪ್ರಸಿದ್ಧ ನಂದಿಗಿರಿಧಾಮದಲ್ಲಿ ರೋಪ್ ವೇ ನಿರ್ಮಾಣ ಕಾಮಗಾರಿಗೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು ಪ್ರವಾಸಿಗರ ಬಹುದಶಕಗಳ ಕನಸು ನನಸಾಗಿಸುವ ಕಾರ್ಯಕ್ಕೆ ಚಾಲನೆ ದೊರೆತಿದೆ. ಖ್ಯಾತ ನಟ ಶಂಕರ್ ನಾಗ್ ಅವರು ನಂದಿಗಿರಿಧಾಮದಲ್ಲಿ ರೋಪ್ ವೇ ನಿರ್ಮಿಸಬೇಕು ಎಂದು ಆಸೆಪಟ್ಟಿದ್ದರು. ಅವರ ಆಸೆ ಕೆಲವೇ ತಿಂಗಳಲ್ಲಿ ಈಡೇರಲಿದೆ ಎಂದರು.
ರೋಪ್ ವೇ ನಿರ್ಮಾಣಕ್ಕೆ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ಸ್ ರೋಪ್ ವೇ ಸಂಸ್ಥೆ ಜೊತೆ ಒಪ್ಪಂದ ಮಾಡಿಕೊಂಡಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಯೋಜನೆಗೆ ₹ 93.40 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಸುಮಾರು 2.93 ಕಿ.ಮೀ ದೂರದ ರೋಪ್‌ವೇ ಅಭಿವೃದ್ಧಿಪಡಿಸಲಾಗುತ್ತದೆ ಎಂದರು.
ರೋಪ್‌ವೇ ನಿರ್ಮಾಣದಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಹಕಾರಿಯಾಗಲಿದೆ. ಬೆಟ್ಟದ ಮೇಲಿನ ಮತ್ತು ಕೆಳಗಿನ ಲ್ಯಾಂಡಿಂಗ್ ಸ್ಟೇಷನ್‌ಗಳಲ್ಲಿ ವಿವಿಧ ಸೌಲಭ್ಯಗಳನ್ನು ಪ್ರವಾಸಿಗರಿಗೆ ಕಲ್ಪಿ ಸಲಾಗುತ್ತದೆ. ಬೆಟ್ಟದ ಕೆಳಗಿನ ಟರ್ಮಿನಲ್ ನಲ್ಲಿ 480 ದ್ವಿಚಕ್ರ, 410 ನಾಲ್ಕು ಚಕ್ರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಪುಡ್ ಕೋರ್ಟ್, ಕುಡಿಯುವ ನೀರಿನ ಘಟಕಗಳು, ಶೌಚಾಲಯ ವ್ಯವಸ್ಥೆ, ಟಿಕೆಟ್ ಕೌಂಟರ್‌ಗಳು, ವಿಶ್ರಾಂತಿ ಕೊಠಡಿಗಳು, ರೆಸ್ಟೋರೆಂಟ್, ಮಳಿಗೆಗಳು ಇರುತ್ತವೆ ಎಂದರು.
ಈ ಯೋಜನೆಯಿಂದಾಗಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಪ್ರವಾಸಿ ತಾಣಗಳಿಗೆ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಲಿದೆ. ದೇವನಹಳ್ಳಿ ಕೋಟೆ, ನಂದಿ, ಭೋಗನಂದೀಶ್ವರ, ಘಾಟಿ ಸುಬ್ರಹ್ಮಣ್ಯ, ವಿದುರಾಶ್ವತ್ಥ, ಮುದ್ದೇನಹಳ್ಳಿ ಮುಂತಾದ ಪ್ರವಾಸಿ ತಾಣಗಳು ಅಭಿವೃದ್ಧಿಯಾಗಲಿವೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.