ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದಿಬೆಟ್ಟಕ್ಕೆ ಶೀಘ್ರ ರೋಪ್‌ ವೇ: ಸಚಿವ

ದಶಕದ ಕನಸು ನನಸಾಗುವ ಕಾಲ ಹತ್ತಿರ* ₹10 ಕೋಟಿ ವೆಚ್ಚದಲ್ಲಿ ಕಾಮಗಾರಿ
Last Updated 26 ಫೆಬ್ರುವರಿ 2021, 2:49 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯ ಜನಪ್ರಿಯ ಗಿರಿಧಾಮ ನಂದಿಬೆಟ್ಟವನ್ನು ಅಂತರರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಗುರುವಾರ ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯತೆಯ ಜೊತೆಗೆ ವಿಶೇಷವಾದ ಸಸ್ಯಸಂಪತ್ತು ಇದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿಸಬಹುದು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ ₹10 ಕೋಟಿ ಅನುದಾನ ನೀಡಿದೆ ಎಂದು ಹೇಳಿದರು.

‘15 ವರ್ಷಗಳಿಂದ ರೋಪ್ ವೇ ಬೇಕು ಎಂದು ಸ್ಥಳೀಯರು ಬೇಡಿಕೆ ಇಡುತ್ತಿದ್ದಾರೆ. ಈ ಹಿಂದೆ ಅಂತರರಾಷ್ಟ್ರೀಯ ಕಂಪನಿಯೊಂದು ನಂದಿಬೆಟ್ಟಕ್ಕೆ ರೋಪ್‌ ವೇ ನಿರ್ಮಿಸಲು ಮುಂದೆ ಬಂದಿತ್ತು. ಆದರೆ, ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ದಶಕಗಳ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗುವುದು. ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಯಬಹುದು’ ಎಂದು ಹೇಳಿದರು.

ತಕ್ಷಣ ಟೆಂಡರ್ ಕರೆದು ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ.ಇದರ ಜೊತೆಗೆ ಇಕೊ ಟೂರಿಸಂ, ಸುತ್ತಮುತ್ತಲಿನ ಐದು ಬೆಟ್ಟಗಳಿಗೆ ಚಾರಣ ದಾರಿ, ಪುರಾತತ್ವ ಸ್ಮಾರಕ, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳ ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವ ದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಸೇರಿದಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT