ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 10 ಲಕ್ಷ ಮೌಲ್ಯದ ನಕಲಿ ಮದ್ಯ ವಶ

Last Updated 18 ಜನವರಿ 2021, 1:53 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ತಾಲ್ಲೂಕಿನ ತಾದೂರು ಗ್ರಾಮದ ರೇಷ್ಮೆ ಸಾಕಾಣಿಕೆ ಮನೆಯೊಂದರಲ್ಲಿ ನಕಲಿ ಮದ್ಯ ತಯಾರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಭಾನುವಾರ ಮುಂಜಾನೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಸಿಬ್ಬಂದಿ ₹ 10 ಲಕ್ಷ ಮೌಲ್ಯದ ನಕಲಿ ಮದ್ಯ, ಮದ್ಯಸಾರ, ಬಾಟಲಿ ಹಾಗೂ ಮುಚ್ಚಳಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಟಿ.ಎಂ. ಮಂಜುನಾಥ್ ಬಂಧಿತ. ಅಬಕಾರಿ ಉಪ ಆಯುಕ್ತ ಜಿ.ಪಿ. ನರೇಂದ್ರಕುಮಾರ್ ನೇತೃತ್ವದ ಅಬಕಾರಿ ಇಲಾಖೆಯ ಸಿಬ್ಬಂದಿ ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದಾರೆ. 1,290 ಲೀಟರ್‌ ಸ್ಪಿರಿಟ್ ಸೇರಿದಂತೆ 62 ಲೀಟರ್‌ ಬ್ಲೆಂಡ್, 32 ಕೆ.ಜಿಯಷ್ಟು ಕ್ಯಾಪ್, ಲೇಬಲ್ ಹಾಗೂ ತಯಾರಿಸಿಟ್ಟಿದ್ದ 37.800 ಲೀಟರ್‌ನಷ್ಟು ನಕಲಿ ಮದ್ಯ ವಶಪಡಿಸಿಕೊಂಡಿದ್ದಾರೆ.

ಅಬಕಾರಿ ಇನ್‌ಸ್ಪೆಕ್ಟರ್ ವಿಶ್ವನಾಥಬಾಬು, ಫಿರೋಜ್‌ಖಾನ್, ಲಂಕೇ ಹನುಮಯ್ಯ, ಶಂಕರಪ್ರಸಾದ್, ಮಂಜುಳಾ, ಸಿಬ್ಬಂದಿಯಾದ ನಿತಿನ್, ರಾಘವೇಂದ್ರ, ಕರಿಲಿಂಗ, ಪ್ರಶಾಂತ್, ರಾಘವೇಂದ್ರ ಪಾಟೀಲ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT