ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಸಬಾ, ಪಾತಪಾಳ್ಯ ಕಾರ್ಯಕರ್ತರ ಸಮಾವೇಶ
Last Updated 4 ಅಕ್ಟೋಬರ್ 2021, 4:11 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬೂತ್, ಗ್ರಾಮ, ಹೋಬಳಿ, ತಾಲ್ಲೂಕುಮಟ್ಟದಲ್ಲಿ ಸಮಿತಿ ರಚಿಸಿ 25 ಸಾವಿರಕ್ಕೂ ಹೆಚ್ಚು ಜೆಡಿಎಸ್ ಸದಸ್ಯತ್ವ ಮಾಡಿಸಲಾಗುವುದು’ ಎಂದು ಪಕ್ಷದ ಮುಖಂಡ ಡಿ.ಜೆ. ನಾಗರಾಜರೆಡ್ಡಿ ತಿಳಿಸಿದರು.

ತಾಲ್ಲೂಕಿನ ಗಂಟ್ಲಮಲ್ಲಮ್ಮ ಕಣಿವೆ ಬಳಿ ಭಾನುವಾರ ನಡೆದ ಕಸಬಾ ಹಾಗೂ ಪಾತಪಾಳ್ಯ ಹೋಬಳಿಮಟ್ಟದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಚಿಂತಾಮಣಿ, ಬೆಂಗಳೂರು, ಹಿಂದೂಪುರ ಕಡೆಗಳಿಂದ ಬಂದವರನ್ನು ಶಾಸಕರನ್ನಾಗಿ ಕ್ಷೇತ್ರದ ಜನರು ಆಯ್ಕೆ ಮಾಡಿದ್ದಾರೆ. ಕ್ಷೇತ್ರದ ರೈತನ ಮಗನಾದ ನಾನು ವಿದ್ಯಾರ್ಥಿಗಳು, ಮಹಿಳೆಯರು, ರೈತರು ಸೇರಿದಂತೆ ನೊಂದವರಿಗೆ ನೆರವು ನೀಡಿದ್ದೇನೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನನ್ನನ್ನು ಬೆಂಬಲಿಸಬೇಕು’ ಎಂದು ಕೋರಿದರು.

‘ಕ್ಷೇತ್ರದಲ್ಲಿ 27 ವರ್ಷಗಳಿಂದ ಸತತವಾಗಿ ಜನಪರ ಕಾರ್ಯಕ್ರಮ ಮಾಡಿದ್ದೇನೆ. ನನ್ನ ಜನಪರ ಸೇವೆ ಮೆಚ್ಚಿ ಜೆಡಿಎಸ್ ವರಿಷ್ಠ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಅವರು ನನ್ನನ್ನು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಅಭ್ಯರ್ಥಿ ಘೋಷಣೆ ವಿಚಾರದಲ್ಲಿ ಗೊಂದಲ ಇಲ್ಲ. ನಮ್ಮನ್ನು ವಿಶ್ವಾಸ, ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳುವ ಜೆಡಿಎಸ್ ನಾಯಕರು ಸಹ ನಮ್ಮವರೇ ಆಗಿದ್ದಾರೆ’ಎಂದರು.

‘ನಾಯಕರ ಜೊತೆ ಮಾತನಾಡಿ ಗೊಂದಲ ಬಗೆಹರಿಸುತ್ತೇನೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ. ಕುಮಾರಸ್ವಾಮಿ ಅವರು ಸಿಎಂ ಆಗುತ್ತಾರೆ. ಇಲ್ಲಿನ ಮತದಾರರು ನನ್ನನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ನನಗೆ ಇದೆ’ ಎಂದು ತಿಳಿಸಿದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ. ಮುನೇಗೌಡ ಮಾತನಾಡಿ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಗರಾಜರೆಡ್ಡಿ ಅವರನ್ನು ಜೆಡಿಎಸ್ ಹಿರಿಯ ನಾಯಕರು ಘೋಷಣೆ ಮಾಡಿದ್ದಾರೆ. ನಾಯಕತ್ವ ಮತ್ತು ಅಭ್ಯರ್ಥಿ ಬಗ್ಗೆ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಾಯಕರ ಜೊತೆ ಸಮಾಲೋಚಿಸಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ತಿಳಿಸಲಾಗಿದೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಗೊಂದಲ ಇಲ್ಲ. ಕ್ಷೇತ್ರದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಮಾಡಿ, ಹೆಚ್ಚು ಕಾರ್ಯಕರ್ತರನ್ನು ಸಂಘಟಿಸಲಾಗುವುದುಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹರಿನಾಥರೆಡ್ಡಿ, ಜೆಡಿಎಸ್ ಯುವ ಘಟಕದ ಎಸ್.ಆರ್. ಲಕ್ಷ್ಮೀನಾರಾಯಣ, ಕೊಲಿಂಪಲ್ಲಿ ವೆಂಕಟಸ್ವಾಮಿರೆಡ್ಡಿ, ಗುಡಿಬಂಡೆ ತಾಲ್ಲೂಕು ಕಾರ್ಯಾಧ್ಯಕ್ಷ ಮುರಳಿ, ಮುಖಂಡರಾದ ಆರ್. ಶ್ರೀನಿವಾಸ್, ಪಿ.ಡಿ. ವೆಂಕಟಶಿವಪ್ಪ, ಕಾನಗಮಾಕಲಪಲ್ಲಿಕೆ ಆರ್. ರಮೇಶ್, ಬಾಲಚಂದ್ರಾರೆಡ್ಡಿ, ರಮಣರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT