ಬಾಗೇಪಲ್ಲಿ: ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಸಾಂಬರ್ಗೆ ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ತಾಲ್ಲೂಕಿನ ಗರುಡಾಚಾರ್ಲಪಲ್ಲಿ ಗ್ರಾಮದ ವೆಂಕಟರವಣಪ್ಪನನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ಗುಡಿಬಂಡೆ ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿಯ ಬ್ರಾಹ್ಮಣಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಜೊತೆ ಮಾತುಕತೆ ಮಾಡಿ, ವೆಂಕಟರವಣಪ್ಪ ಬಳಿ ಆರೋಪಿ ಪಾಪಿರೆಡ್ಡಿ ₹ 10 ಸಾವಿರ ನೀಡಿ ವಿಷದ ಮಾತ್ರೆಗಳನ್ನು ಖರೀದಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವೆಂಕಟರಮಪ್ಪ ಮನೆಗೆ ಸರ್ಕಲ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ ಹಾಗೂ ಪೊಲೀಸರು ದಾಳಿ ಮಾಡಿ ಪರಿಶೀಲಿಸಿದರು. ಮನೆಯಲ್ಲಿ ನಾಟಿ ಔಷಧಿ ತಯಾರಿಸುವ ಯಂತ್ರಗಳನ್ನು, ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.