ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯಲ್ಲಿ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಗೌರಿಬಿದನೂರ ತಾಲ್ಲೂಕಿನ ತೊಂಡೇಬಾವಿ ಕ್ಷೇತ್ರದ ಸದಸ್ಯೆ ಸರಸ್ವತಮ್ಮ ಅಶ್ವತ್ಥನಾರಾಯಣಗೌಡ ಅವರು ಅವಿರೋಧವಾಗಿ ಆಯ್ಕೆಯಾದರು.

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಮತ್ತು ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಈ ಹಿಂದೆ ಉಪಾಧ್ಯಕ್ಷೆಯಾಗಿದ್ದ ಪಿ.ನಿರ್ಮಲಾ ಮುನಿರಾಜು ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಬಹುತೇಕ ಸದಸ್ಯರು ಅನೇಕ ತಿಂಗಳಿಂದ ಪ್ರಯತ್ನ ನಡೆಸಿ ಕೊನೆಗೆ ನವೆಂಬರ್ 5 ರಂದು ನಿರ್ಮಲಾ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ ಅಧಿಕಾರದಿಂದ ಕೆಳಗಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.