ಚಿಕ್ಕಬಳ್ಳಾಪುರ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿ ಪ್ರಯುಕ್ತ ನಗರದಲ್ಲಿ ನ.15 ರಂದು ಏಕತಾ ಪಾದಯಾತ್ರೆಯ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಡಾ.ಕೆ ಸುಧಾಕರ್ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟೇಲ್ ಅವರ ಪರಂಪರೆಯನ್ನು ಗೌರವಿಸಲು ಹಾಗೂ ಅವರ ವಿಚಾರಗಳು, ಆದರ್ಶಗಳನ್ನು ಬಿಂಬಿಸುವ ಉದ್ದೇಶದಿಂದ ವಿಷಯಾಧಾರಿತವಾಗಿ ಹಲವು ಕಾರ್ಯಕ್ರಮಗಳನ್ನು ರಾಷ್ಟ್ರದಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಅದರ ಭಾಗವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಸ್ಥಳಗಳಲ್ಲಿ ಏಕತಾ ಪಾದಯಾತ್ರೆ ಕಾರ್ಯಕ್ರಮ ಹಾಗೂ ರಾಷ್ಟ್ರೀಯತೆ, ಸ್ವಾತಂತ್ರ್ಯ ಹೋರಾಟ ಹಾಗೂ ರಾಷ್ಟ್ರ ನಾಯಕರ ಕೊಡುಗೆಗಳ ಕುರಿತು ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ಸೃಜನಶೀಲ ರೀಲ್ಸ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು 7 ದಿನಗಳ ಕಾಲ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ನ.15 ರಂದು ನಡೆಯುವ ಏಕತಾ ಪಾದಯಾತ್ರೆಯಲ್ಲಿ 2000ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಪಾದಯಾತ್ರೆಯ ಮಾರ್ಗ ಹಾಗೂ ಇನ್ನಿತರ ವಿವರಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ನಾಗರಿಕ ಸಂಬಂಧವನ್ನು ಗಾಢವಾಗಿಸಲು ಮತ್ತು ಯುವ ಸಮೂಹದಲ್ಲಿ ಏಕತೆಯ ಮನೋಭಾವ ಬಲಪಡಿಸಲು ಈ ಪಾದಯಾತ್ರೆ ವಿನ್ಯಾಸಗೊಳಿಸಲಾಗಿದೆ. ಇದು ರಾಷ್ಟ್ರ ನಿರ್ಮಾಣದಲ್ಲಿ ಯುವ ವರ್ಗದ ಪಾತ್ರವನ್ನು ಬಲಪಡಿಸುತ್ತದೆ. ಭಾರತದ ರಾಷ್ಟ್ರೀಯ ನಾಯಕರ ಕೊಡುಗೆಗಳಿಗೆ ಗೌರವ ಸಲ್ಲಿಸುತ್ತದೆ ಎಂದು ತಿಳಿಸಿದರು.

15ರಿಂದ 29 ವರ್ಷ ವಯೋಮಿತಿಯ ಯುವಜನರಿಗಾಗಿ ಸಾಮಾಜಿಕ ಮಾಧ್ಯಮ ರೀಲ್ಸ್ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಮತ್ತು ಸರ್ದಾರ್@150 ಯುವ ನಾಯಕರ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸ್ಪರ್ಧೆಗಳಲ್ಲಿ ವಿಜೇತರಾದ 150 ಜನರಿಗೆ ರಾಷ್ಟ್ರೀಯ ಪಾದಯಾತ್ರೆಯಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಲಾಗುತ್ತದೆ. ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ನ.15 ಕೊನೆ ದಿನ ಎಂದು ತಿಳಿಸಿದರು.

ಪಾದಯಾತ್ರೆಯಲ್ಲಿ ಭಾಗವಹಿಸುವವರಿಗೆ ಲಘು ಉಪಾಹಾರ, ಪ್ರಮಾಣ ಪತ್ರ, ಟೀ ಶರ್ಟ್, ಕ್ಯಾಪ್, ರಾಷ್ಟ್ರೀಯ ಬಾವುಟ ನೀಡಲಾಗುತ್ತದೆ. ಏಕತಾ ಪಾದಯಾತ್ರೆಯಲ್ಲದೆ ಜಿಲ್ಲೆಯಲ್ಲಿ 1 ವಾರಗಳ ಕಾಲ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸ್ವಚ್ಛತಾ ಶ್ರಮದಾನ, ಯೋಗ ಕಾರ್ಯಕ್ರಮ ಸೇರಿದಂತೆ ಇತರ ಕಾರ್ಯಕ್ರಮಗಳು ನಡೆಯುತ್ತವೆ. ಏಕತಾ ಪಾದಯಾತ್ರೆಯಲ್ಲಿ ಎಲ್ಲರೂ ಭಾಗವಹಿಸಿ ಒಗ್ಗಟ್ಟಿನ ಮನೋಭಾವವನ್ನು ಆಚರಿಸುವ ಮೂಲಕ ಸರ್ದಾರ್ ಪಟೇಲ್ ಅವರ ಏಕತಾ ಭಾರತದ ದೃಷ್ಟಿಕೋನವನ್ನು ಗೌರವಿಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಜಿಲ್ಲಾ ಯುವಜನ ಅಧಿಕಾರಿ ರಾಜೇಶ್ ಕಾರಂತ್ ಕೆ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಆರ್. ಜಯಲಕ್ಷ್ಮಿಬಾಯಿ, ಅಥ್ಲೆಟಿಕ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿ ಮಂಚನಬಲೆ ಶ್ರೀನಿವಾಸ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮಾಹಿತಿಗೆ ಸಂಪರ್ಕ

ಮಾಹಿತಿಗಾಗಿ ಮೈ ಭಾರತ್ ಪೋರ್ಟಲ್ ನ www.mybharat.gov.in ಜಾಲತಾಣಕ್ಕೆ ಭೇಟಿ ನೀಡಿ ಹಾಗೂ ಮೈ ಭಾರತ್ ಕಚೇರಿ 08152-222629 9845407748 ಸಂಪರ್ಕಿಸಬಹುದು ಎಂದು ಡಾ.ಕೆ.ಸುಧಾಕರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.