ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ಭಾಷೆ ಉಳಿಸಿ’

Last Updated 3 ಡಿಸೆಂಬರ್ 2020, 8:01 IST
ಅಕ್ಷರ ಗಾತ್ರ

ಚಿಂತಾಮಣಿ: ನಗರದ ಬಾಗೇಪಲ್ಲಿ ವೃತ್ತದಲ್ಲಿ ಅನ್ನಪೂರ್ಣೇಶ್ವರಿ ಗೆಳೆಯರ ಬಳಗದಿಂದ ಸರಳವಾಗಿಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಬಳಗದ ಅಧ್ಯಕ್ಷ ಸುರೇಶ್ ಮಾತನಾಡಿ, ಪ್ರತಿವರ್ಷ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿತ್ತು. ಈ ವರ್ಷ ಕೊರೊನಾ ವೈರಸ್ ಹರಡುವ ಭೀತಿಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ಕನ್ನಡವನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರೂ ಶ್ರಮಿಸಬೇಕು. ನಾಡು, ಭಾಷೆಯ ಮೇಲೆ ಅಭಿಮಾನವಿರಬೇಕು. ಎಷ್ಟು ಭಾಷೆಗಳನ್ನು ಬೇಕಾದರೂ ಕಲಿತರೂ ಕನ್ನಡಕ್ಕೆ ಪ್ರಥಮ ಸ್ಥಾನ ನೀಡಬೇಕು. ಕನ್ನಡ ಕಾರ್ಯಕ್ರಮಗಳು ಕೇವಲ ನವೆಂಬರ್‌ಗೆ ಮಾತ್ರ ಸೀಮಿತವಾಗಬಾರದು. ವರ್ಷಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಭುವನೇಶ್ವರಿ ಭಾವಚಿತ್ರಕ್ಕೆ ವಿಶೇಷ ಅಲಂಕಾರ ಮಾಡಿ, ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು. ನಗರಸಭೆ ಮಾಜಿ ಸದಸ್ಯ ದೇವರಾಜ್, ನಾಗೇಶ್, ಕಲಾವತಿ, ಸಾಯಿನಾಥ್, ನರಸಿಂಹ, ಆಂಜಪ್ಪ, ಮಂಜುನಾಥ್, ನಟರಾಜ್, ಲೋಕೇಶ್, ಅಶ್ವತ್ಥರೆಡ್ಡಿ, ಅಶೋಕ್, ರಮೇಶ್, ವೆಂಕಟಶಿವಾರೆಡ್ಡಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT