ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಚೇನಹಳ್ಳಿ | 'ಸಮಸ್ಯೆ ಎದುರಾಗದಂತೆ ಜಾಗೃತಿ ವಹಿಸಿ'

Published 31 ಡಿಸೆಂಬರ್ 2023, 14:07 IST
Last Updated 31 ಡಿಸೆಂಬರ್ 2023, 14:07 IST
ಅಕ್ಷರ ಗಾತ್ರ

ಮಂಚೇನಹಳ್ಳಿ: ತಾಲ್ಲೂಕಿನ ‌ಜರಬಂಡಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿನ ಹನುಮಂತಪುರದ ಬಳಿ‌ ಇರುವ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುಳಾ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳು ಮತ್ತು ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಯ ಬಗ್ಗೆ ‌ಪರಿಶೀಲಿಸಿದರು.

ವಸತಿ ಶಾಲೆಯ ಪ್ರಾಂಶುಪಾಲರು ಮತ್ತು ವಾರ್ಡನ್ ವಿದ್ಯಾರ್ಥಿನಿಯರ ಶೈಕ್ಷಣಿಕ ಅಭಿವೃದ್ಧಿಯ ಜತೆಗೆ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ತಲುಪುವಂತೆ ಮಾಡಬೇಕು. ಸ್ವಚ್ಛತೆ ಕಾಪಾಡಿ ಉತ್ತಮ ಗುಣಮಟ್ಟದ ಆಹಾರ ನೀಡಲು ಹೆಚ್ಚಿನ ಆದ್ಯತೆ ವಹಿಸಬೇಕಾಗಿದೆ. ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುವ ಜತೆಗೆ ನಿತ್ಯ ವಿದ್ಯಾರ್ಥಿನಿಯರ ರಕ್ಷಣೆಗೆ ಪ್ರಮುಖ ಜವಾಬ್ದಾರಿ ವಹಿಸಬೇಕು. ವಸತಿ ನಿಲಯದಲ್ಲಿ ಅಹಿತಕರ ಘಟನೆ ನಡೆದಲ್ಲಿ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿ.ಪಂ ಸಿಇಒ ಪ್ರಕಾಶ್ ಜಿ.ನಿಟ್ಟಾಳಿ ಮಾತನಾಡಿ, ವಸತಿ ನಿಲಯಕ್ಕೆ ಸಂಬಂಧಿಸಿದಂತೆ ಸ್ಥಳೀಯ ಗ್ರಾ.ಪಂ ನಿಂದ ಅಗತ್ಯವಿರುವ ಸಹಕಾರ ಪಡೆದುಕೊಳ್ಳಬಹುದು ಎಂದು ಹೇಳಿದರು.

ತಹಶೀಲ್ದಾರ್ ಮಹೇಶ್.ಎಸ್.ಪತ್ರಿ, ತಾ.ಪಂ ಇಒ ಆರ್.ಹರೀಶ್, ಸಹಾಯಕ ನಿರ್ದೇಶಕರು ಗ್ರೇಡ್ 1 ಸಮಾಜ ಕಲ್ಯಾಣ ಇಲಾಖೆ ಚನ್ನಪ್ಪ ಎಸ್.ಗೌಡ ನಾಯಕರ್, ಪಿಡಿಒ ಮಧು, ಶ್ರೀನಾಥ್ ಬಾಬು ಇದ್ದರು.

ಮಂಚೇನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿನ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುಳಾ ಮತ್ತು ಇತರ ಅಧಿಕಾರಿಗಳು ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು
ಮಂಚೇನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿನ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುಳಾ ಮತ್ತು ಇತರ ಅಧಿಕಾರಿಗಳು ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT