ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ: ಶಾಲೆಯ ಮುಖ್ಯ ಶಿಕ್ಷಕ ಅಮಾನತು

14 ದಿನ ನ್ಯಾಯಾಂಗ ಬಂಧನ
Published 29 ಮೇ 2024, 14:00 IST
Last Updated 29 ಮೇ 2024, 14:00 IST
ಅಕ್ಷರ ಗಾತ್ರ

ಶಿಡ್ಲಘಟ್ಟ (ಚಿಕ್ಕಬಳ್ಳಾಪುರ): ತಾಲ್ಲೂಕಿನ ಸರ್ಕಾರಿ ಶಾಲೆಯೊಂದರ ಏಳನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.

ಆರೋಪಿ ಮುಖ್ಯ ಶಿಕ್ಷಕನನ್ನು 14 ದಿನ ನ್ಯಾಯಾಂಗ ಬಂಧನ ಒಪ್ಪಿಸಲಾಗಿದೆ. ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಾಲಕಿಯರ ಬಾಲ ಮಂದಿರದಲ್ಲಿ ಇರಿಸಲಾಗಿದೆ. 

ಡಿಡಿಪಿಐ ಬೈಲಾಂಜನೇಯ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ ಹಾಗೂ ಅಧಿಕಾರಿಗಳ ತಂಡ ಬುಧವಾರ ಶಾಲೆಗೆ ಭೇಟಿ ನೀಡಿ ಶಿಕ್ಷಕರು, ಮಕ್ಕಳಿಂದ ಮಾಹಿತಿ ಪಡೆಯಿತು. 

ಶಾಲೆಯಲ್ಲಿ 85 ವಿದ್ಯಾರ್ಥಿಗಳು ಕಲಿಯುತ್ತಿದ್ದರೂ ಶಾಲೆ ಆರಂಭದ ಮೊದಲ ದಿನವಾದ ಬುಧವಾರ 10 ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದರು. 

‘ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಿ ಎಂದು ತಾಲ್ಲೂಕಿನ ಹಳ್ಳಿಗಳಲ್ಲಿ ಆಯಾ ಶಾಲೆಯ ಶಿಕ್ಷಕರು ಮನೆ ಮನೆಗೆ ಹೋಗಿ ಪೋಷಕರ ಮನವೊಲಿಸುತ್ತಿದ್ದರು. ಈಗ ಯಾವ ಮುಖ ಹೊತ್ತು ಪೋಷಕರ ಮನೆಗಳ ಬಳಿ ಹೋಗಬೇಕು’ ಎಂದು ಬಹಳಷ್ಟು ಶಿಕ್ಷಕರು ಅಧಿಕಾರಿಗಳ ಮುಂದೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT