ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಡಿಬಂಡೆ: ಚುನಾವಣೆ ಅರಿವು ಮೂಡಿಸಲು ಶಾಲಾ ಸಂಸತ್ತು

Published : 8 ಜುಲೈ 2023, 16:01 IST
Last Updated : 8 ಜುಲೈ 2023, 16:01 IST
ಫಾಲೋ ಮಾಡಿ
Comments

ಗುಡಿಬಂಡೆ: ಇಂದಿನ ಮಕ್ಕಳು ಮುಂದಿನ ಈ ದೇಶದ ಆಸ್ತಿಯಾಗಿದ್ದು, ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿರುವ ಚುನಾವಣೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಮೂಲಕ ನಾಯಕತ್ವ ಗುಣ ಬೆಳೆಸುವ ದಿಸೆಯಲ್ಲಿ ಶಾಲಾ ಸಂಸತ್ತು ಸಹಕಾರಿಯಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಕುಮಾರ್ ತಿಳಿಸಿದರು.

ಸೋಮೇನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ಸಂಸತ್ತು ಚುನಾವಣೆ ಉದ್ದೇಶಿಸಿ ಮಾತನಾಡಿದರು.

ಪಠ್ಯಕ್ಕೆ ಪೂರಕವಾದ ಪಠ್ಯೇತರ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಚುನಾವಣೆ ಕುರಿತು ಅರಿವು ಮೂಡಿಸಲು ಮಕ್ಕಳ ಸಂಘದ ಚುನಾವಣೆ ಪ್ರಕ್ರಿಯೆ ಅತ್ಯಮೂಲ್ಯವಾಗಿದೆ. ಪಠ್ಯದಲ್ಲಿ ಚುನಾವಣೆ ಪ್ರಕ್ರಿಯೆ ಕುರಿತು ಓದುವುದಕ್ಕಿಂತ ಪ್ರಾತ್ಯಕ್ಷಿಕವಾಗಿ ವಿದ್ಯಾರ್ಥಿಗಳು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಭವಿಷ್ಯತ್ತಿನಲ್ಲಿ ಎದುರಿಸುವ ಚುನಾವಣೆಗಳ ಅರಿವು ಪಡೆಯಬಹುದು ಎಂದರು.

ಶಾಲಾ ಸಂಸತ್ತು ಚುನಾವಣೆಯ ನೇತೃತ್ವದಲ್ಲಿ ಸಮಾಜ ವಿಜ್ಞಾನ ಶಿಕ್ಷಕ ಮನೋಹರ್, ಶಿಕ್ಷಕ ನಾಗಲಿಂಗಪ್ಪ, ರ‍ಜೇಶ್, ರಾಮಕೃಷ್ಣ, ರಾಜಶೇಖರ್, ನಾಗೇಶ್, ಜವೇರಿಯಾ, ಮಮತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT