ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟ | ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳಿಂದ ಮಾಸ್ಕ್ ತಯಾರಿ

Last Updated 9 ಜೂನ್ 2020, 12:53 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ರಾಜ್ಯದಾದ್ಯಂತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಉಚಿತವಾಗಿ ಮಾಸ್ಕ್‌ ವಿತರಿಸುವ ಯೋಜನೆ ರೂಪಿಸಲಾಗಿದೆ.

ತಾಲ್ಲೂಕಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲ್ಲೂಕು ಕಾರ್ಯದರ್ಶಿ ಪ್ರಕಾಶ್ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಮಾಸ್ಕ್ ತಯಾರಿಸುತ್ತಿದ್ದಾರೆ.

ತಾಲ್ಲೂಕಿನಲ್ಲಿ ಸುಮಾರು ಎರಡು ಸಾವಿರದ ಆರು ನೂರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕರು ರಾಜ್ಯ ಹಂತದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನೆರವು ಕೋರಿ ಎಲ್ಲ ವಿದ್ಯಾರ್ಥಿಗಳಿಗೂ ಮಾಸ್ಕ್ ತಯಾರಿಸಿ ಕೊಡುವಂತೆ ಕೋರಿದ್ದಾರೆ. ಅದರಂತೆ ಜಿಲ್ಲಾ ಹಂತ ಮತ್ತು ಎಲ್ಲಾ ತಾಲ್ಲೂಕು ಹಂತಗಳಲ್ಲಿ ಆಯಾ ಜಿಲ್ಲೆಗೆ ಅವಶ್ಯಕವಾಗಿರುವಂತಹ ಮಾಸ್ಕ್ ಗಳನ್ನು ಜಿಲ್ಲಾ ಹಂತದಲ್ಲಿಯೇ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ತಯಾರಿಸುತ್ತಿದ್ದಾರೆ.

ಕೊರೊನಾ ಸೋಂಕು ತಡೆಗಟ್ಟಲು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತೊಡಗಿಸಿಕೊಂಡಿದ್ದಾರೆ. ಇಡೀ ಜಿಲ್ಲೆಯಲ್ಲಿ ದಾನಿಗಳಿಂದ ಬಟ್ಟೆಗಳನ್ನು ಸಂಗ್ರಹಿಸಿ ಸುಮಾರು ಇಪ್ಪತ್ತು ಸಾವಿರ ಮಾಸ್ಕ್ ತಯಾರಿಕೆಯ ಗುರಿ ಹೊಂದಲಾಗಿದೆ. ಈಗಾಗಲೇ ಹನ್ನೆರಡು ಸಾವಿರದಷ್ಟು ಮಾಸ್ಕ್ ತಯಾರಾಗಿವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ತರಬೇತಿ ಆಯುಕ್ತ ಸಿ.ಬಿ.ಪ್ರಕಾಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT