ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕೌಟರ್  ಗೈಡರ್ ಗಳಿಗೆ ಅಭಿನಂದನಾ ಕಾರ್ಯಕ್ರಮ

Last Updated 19 ಸೆಪ್ಟೆಂಬರ್ 2021, 12:06 IST
ಅಕ್ಷರ ಗಾತ್ರ

ಶಿಡ್ಲಘಟ್ಟ : ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ನಡೆದಂತಹ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರು ಶಿಸ್ತಿನಿಂದ ಭಾಗವಹಿಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಸಹಕರಿಸಿರುತ್ತಾರೆ. ಅವರಿಗೆ ಇಲಾಖೆ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ ತಿಳಿಸಿದರು.

ತಾಲ್ಲೂಕಿನ ಬೆಳ್ಳೂಟಿ ಗ್ರಾಮದ ಆಂಜನೇಯ ದೇವಾಲಯದ ಸಮುದಾಯ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಸ್ಕೌಟರ್ ಗೈಡರ್ ಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಹಿಂದಿನಿಂದಲೂ ತುಂಬಾ ಉತ್ತಮವಾಗಿ ಮೂಡಿ ಬರುತ್ತಿದ್ದು ಇದೇ ರೀತಿ ಮುಂದೆಯೂ ಸಹ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಸಹಕಾರವನ್ನು ಮುಂದುವರಿಸಬೇಕೆಂದು ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಸಿ.ಬಿ.ಪ್ರಕಾಶ್ ಮಾತನಾಡಿ, ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಗತಿಗಾಗಿ ಎಲ್ಲಾ ಶಿಕ್ಷಕರು ತಮ್ಮ ಶಾಲೆಗಳಲ್ಲಿ ಘಟಕಗಳನ್ನು ಸ್ಥಾಪಿಸುವುದರ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಬೇಕೆಂದು ಕರೆ ನೀಡಿದರು.

ಜಿಲ್ಲಾ ಸಂಸ್ಥೆಯ ಕೇಂದ್ರ ಕಾರ್ಮಿಕ ಆಯುಕ್ತರಾದ ಲಕ್ಷ್ಮಿನಾರಾಯಣ ಗುಪ್ತಾ ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ವೈಯಕ್ತಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಸಮಾಜಮುಖಿ, ಸೇವಾ ಕೆಲಸಗಳನ್ನು ಹಮ್ಮಿಕೊಳ್ಳುವುದರ ಜತೆಗೆ ದೇಶಭಕ್ತಿಯನ್ನು ಬೆಳೆಸುವ ಕಾರ್ಯಕ್ರಮಗಳನ್ನು ನಡೆಸಲು ದುಡಿಯುತ್ತಿರುವ ಶಿಕ್ಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಸಲುವಾಗಿ ಸ್ಕೌಟ್ಸ್ ಗೈಡ್ಸ್ ಸಂಸ್ಥೆಗೆ ದಾಖಲು ಮಾಡಿಕೊಂಡು ಉಚಿತವಾಗಿ ಸಮವಸ್ತ್ರವನ್ನು ವಿತರಿಸಲಾಯಿತು. ತಾಲ್ಲೂಕಿನಲ್ಲಿ ಉತ್ತಮವಾಗಿ ದಳಗಳನ್ನು ನಡೆಸುತ್ತಿರುವ ಸ್ಕೌಟರ್ ಗೈಡರ್ ಗಳಿಗೆ ಸ್ಥಳೀಯ ಸಂಸ್ಥೆ ವತಿಯಿಂದ ಅಭಿನಂದನಾ ಪ್ರಮಾಣ ಪತ್ರಗಳನ್ನು ನೀಡಲಾಯಿತು. ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸೇವೆ ಸಲ್ಲಿಸಿದ ಸ್ವಯಂಸೇವಕರಿಗೆ ಅಭಿನಂದನಾ ಪ್ರಮಾಣ ಪತ್ರ ವಿತರಿಸಲಾಯಿತು .

ತಹಶೀಲ್ದಾರ್ ಬಿ.ಎಸ್.ರಾಜೀವ್, ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ, ಕ್ಷೇತ್ರ ಸಮನ್ವಯಾಧಿಕಾರಿ, ಎನ್. ತ್ಯಾಗರಾಜು, ಟಿಪಿಇಒ ಕೆಂಚವೀರಪ್ಪ, ಜಿಲ್ಲಾ ಸಂಸ್ಥೆ ಕೇಂದ್ರ ಸ್ಥಾನಿಕ ಆಯುಕ್ತ ಲಕ್ಷ್ಮಿನಾರಾಯಣಗುಪ್ತ, ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಪ್ರಕಾಶ್, ಮಾಜಿ ಜಿಲ್ಲಾ ಕಾರ್ಯದರ್ಶಿ ರಂಗನಾಥ್, ತಾಲ್ಲೂಕು ಕಾರ್ಯದರ್ಶಿ ಮುನಿರಾಜು, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬೈರಾರೆಡ್ದಿ, ರುದ್ರೇಶ್ ಮೂರ್ತಿ, ಆನೂರು ಗ್ರಾಮ ಪಂಚಾಯಿ ಉಪಾಧ್ಯಕ್ಷ ವಿಜಯೇಂದ್ರ, ಸದಸ್ಯ ಬೆಳ್ಳೂಟಿ ಸಂತೋಷ್, ಗ್ರಾಮಾಂತರ ಟ್ರಸ್ಟ್ ನ ಉಷಾಶೆಟ್ಟಿ, ಬಿಆರ್ ಪಿ ಗಳು ಸಿಆರ್ ಪಿಗಳು, ಬಿಐಇಆರ್ ಟಿ ಗಳು, ತಾಲ್ಲೂಕಿನ ಸ್ಕೌಟ್ಸ್ ಗೈಡ್ಸ್ ಶಿಕ್ಷಕರು, ಸ್ವಯಂ ಸೇವಕರು, ರೋವರ್ ರೇಂಜರ್ ಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT