ಸೋಮವಾರ, ಅಕ್ಟೋಬರ್ 18, 2021
24 °C

ಚಿಕ್ಕಬಳ್ಳಾಪುರ ನಗರಸಭೆಗೆ ಸೀಮ್ಯಾಕ್ ಪ್ರಶಸ್ತಿ ಗರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರಸಭೆಯು ಸೀಮ್ಯಾಕ್ ಪ್ರಶಸ್ತಿಗೆ ಭಾಜನವಾಗಿದೆ. ‌ನಗರ ಸ್ಥಳೀಯ ಸಂಸ್ಥೆಗಳು ಘನ ತ್ಯಾಜ್ಯ ನಿರ್ವಹಣೆಯ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿಷ್ಠಿತ ಸೀಮ್ಯಾಕ್ ಸಂಸ್ಥೆ ನೀಡುವ ರಾಜ್ಯ ಮಟ್ಟದ ದ್ವಿತೀಯ ಬಹುಮಾನಕ್ಕೆ ಇಲ್ಲಿನ ನಗರಸಭೆ ಭಾಜನವಾಗಿದೆ.

ಒಣ ಮತ್ತು ಹಸಿ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸುವ ಜತೆಗೆ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ತ್ಯಾಜ್ಯ ನಿರ್ವಹಣೆಯ ವಿಚಾರದಲ್ಲಿ ಸ್ಥಳೀಯ ಸಂಸ್ಥೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ದೃಷ್ಟಿಯಿಂದ ಸಿಟಿ ಮ್ಯಾನೇಜರ್ಸ್ ಅಸೋಸಿಯೇಷನ್ ಕರ್ನಾಟಕ (ಸೀಮ್ಯಾಕ್ ) ಸಂಸ್ಥೆಯು ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ನೀಡುತ್ತದೆ.  ಬೆಂಗಳೂರಿನ ವಿಕಾಸಸೌಧದಲ್ಲಿ ಸೋಮವಾರ ಈ ಕಾರ್ಯಕ್ರಮ ನಡೆಯಿತು.

ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಚಿಕ್ಕಬಳ್ಳಾಪುರ ನಗರಸಭೆ ಪೌರಾಯುಕ್ತ ಮಹಾಂತೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ₹ 75 ಸಾವಿರ ನಗದು, ಸ್ಮರಣಿಕೆ ಹಾಗೂ ಪ್ರಮಾಣಪತ್ರವನ್ನು ಹೊಂದಿದೆ.

 ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ರೇಣುಕಾ, ಆರೋಗ್ಯ ನಿರೀಕ್ಷಕರಾದ ರೇಖಾ, ಶ್ರೀನಾಥ್ ಮತ್ತಿತರರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.