ಗೌರಿಬಿದನೂರು: ತಾಲ್ಲೂಕಿನ ವಿವಿಧೆಡೆ ಭಾನುವಾರ ಸಂಜೆ ಸರಣಿ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.

ಕುರುಬರಹಳ್ಳಿ ಗೇಟ್ ಬಳಿ ಎರಡು ದ್ವಿಚಕ್ರವಾಹನಗಳ ಸವಾರರು ಮುಖಾಮುಖಿ ಡಿಕ್ಕಿ ಹೊಡೆದಿರುವ ಪರಿಣಾಮ ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.

ನಗರ ಹೊರವಲಯದ ಕಲ್ಲೂಡಿ ಗ್ರಾಮದ ಬಳಿ ಬೆಂಗಳೂರು- ಹಿಂದೂಪುರ ರಸ್ತೆಯ ಮಧ್ಯೆಭಾಗದಲ್ಲಿನ ವಿಭಜಕಕ್ಕೆ ದ್ವಿಚಕ್ರವಾಹನ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುಂಡಾಪುರ ಹೊರವಲಯದಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಇದರಿಂದಾಗಿ ವಾಹನ ಸವಾರರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಒಟ್ಟಾರೆ ನಗರ ಸಮೀಪದಲ್ಲಿಯೇ ವಿವಿಧ ಸ್ಥಳಗಳಲ್ಲಿ ಸರಳಿ ಅಪಘಾತಗಳು ಸಂಭವಿಸಿದ್ದು ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.