ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿರುವ ಆರೋಪದಡಿ ಪದವಿ ಕಾಲೇಜೊಂದರ ಎಸ್ಡಿಎ ಭೀಮರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗೆ ಸಹಕರಿಸುವುದಾಗಿ ವಿದ್ಯಾರ್ಥಿನಿಯನ್ನು ಮನೆಗೆ ಕರೆದೊಯ್ದು ಭೀಮರಾಜ್ ಅತ್ಯಾಚಾರ ಎಸಗಿದ್ದಾನೆ.

ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪೊಲೀಸರು ಭೀಮರಾಜ್ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆರೋಪಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ. ಭೀಮರಾಜ್ ವಿರುದ್ಧ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ಪ್ರಾಣ ಬೆದರಿಕೆ, ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.