ಗುಡಿಬಂಡೆ (ಚಿಕ್ಕಬಳ್ಳಾಪುರ): ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಮದ್ಯದ ಅಮಲಿನಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಅಲ್ಲದೆ ತಂದೆ ಮತ್ತು ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಅವರನ್ನು ಮನೆ ಹಿಂಭಾಗದ ತಿಪ್ಪೆಗುಂಡಿಗೆ ಎಸೆದು ಪರಾರಿ ಆಗಿದ್ದಾನೆ. ನೆರೆಹೊರೆಯವರು ಈ ವಿಚಾರವನ್ನು ಪೊಲೀಸರಿಗೆ ತಲುಪಿಸಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆರೋಪಿಗೆ ವಿವಾಹವಾಗಿದ್ದು ಆತನ ಪತ್ನಿ ದೂರವಿದ್ದಾಳೆ ಎನ್ನಲಾಗುತ್ತಿದೆ. ಈತ ತಂದೆ, ತಾಯಿಯ ಜೊತೆ ವಾಸಿಸುತ್ತಿದ್ದ. ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಸೋಮವಾರ ರಾತ್ರಿ ಗುಡಿಬಂಡೆ ಠಾಣೆಗೆ ಡಿವೈಎಸ್‌ಪಿ ಶಿವಕುಮಾರ್ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದರು. ಆಸ್ಪತ್ರೆಗೂ ಭೇಟಿ ನೀಡಿ ಆರೋಪಿಯ ತಂದೆಯಿಂದ ಮಾಹಿತಿ ಕಲೆ ಹಾಕಿದರು.