ಚಿಂತಾಮಣಿ: ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಆಮ್ಲಜನಕ ಘಟಕದ ಪಕ್ಕದ ಶೆಡ್‌ನಲ್ಲಿ ಮಲಗಿದ್ದ 65 ವರ್ಷದ ವೃದ್ಧೆಯ ಮೇಲೆ ಮಂಗಳವಾರ ರಾತ್ರಿ ಚಿಕಿತ್ಸೆಗೆ ಬಂದಿದ್ದ ವ್ಯಕ್ತಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.

ಆಸ್ಪತ್ರೆಯ ಸಿಬ್ಬಂದಿಯೇ ಆರೋಪಿ ಚಿಂತಾಮಣಿಯ ಇರ್ಫಾನ್ (24) ಎಂಬಾತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯು ನಡುರಾತ್ರಿ 12.40ಕ್ಕೆ ಆಸ್ಪತ್ರೆಗೆ ಬಂದು ಹೊರರೋಗಿ ಚೀಟಿ ಪಡೆದು ಚಿಕಿತ್ಸೆ ಪಡೆದಿದ್ದಾನೆ. ವಾಪಸ್ ತೆರಳುವಾಗ ಶೆಡ್‌ನಲ್ಲಿ ಮಲಗಿದ್ದ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಹಿಳೆ ಕಿರುಚಿಕೊಂಡಿದ್ದಾರೆ. ಕರ್ತವ್ಯ ನಿರತ ವೈದ್ಯೆ ಡಾ.ವಾಣಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ್ ಕುಮಾರ್ ನಗರಠಾಣೆಗೆ ಬುಧವಾರ ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.

ಸಂತ್ರಸ್ತೆಯನ್ನು ಆಸ್ಪತ್ರೆಯ ಮಹಿಳಾ ವಾರ್ಡ್‌ಗೆ ದಾಖಲಿಸಲಾಗಿದೆ. ರಾತ್ರಿ ವೇಳೆ ಆಸ್ಪತ್ರೆಯಲ್ಲಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಬೇಕು ಎಂದು ಮನವಿ ಮಾಡಿದ್ದಾರೆ.

ವೃದ್ಧೆಯು ಚಿಂತಾಮಣಿ ತಾಲ್ಲೂಕಿನ ಗ್ರಾಮವೊಂದವರಾಗಿದ್ದಾರೆ. ಶೆಡ್‌ನಲ್ಲಿ ಭಿಕ್ಷುಕರು ಸೇರಿದಂತೆ ಅಪರಿಚಿತರು ಆಗಾಗ್ಗೆ ತಂಗುತ್ತಿದ್ದರು ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.