ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ | ತಿಂಡಿ ಆಸೆ ತೋರಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಅಪ್ರಾಪ್ತ ಬಾಲಕನಿಂದ ಕೃತ್ಯ
Last Updated 31 ಜನವರಿ 2020, 12:42 IST
ಅಕ್ಷರ ಗಾತ್ರ

ಬಾಗೇಪಲ್ಲಿ: ತಾಲ್ಲೂಕಿನ ಪಾತಪಾಳ್ಯ ಪೋಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಗುರುವಾರ ರಾತ್ರಿ ಅಪ್ರಾಪ್ತ ಬಾಲಕನೊಬ್ಬ ನೆರೆಮನೆಯ ಆರು ವರ್ಷದ ಬಾಲಕಿಗೆ ತಿಂಡಿ ಆಸೆ ತೋರಿಸಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.

ಬಾಲಕ ತನ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಕೃತ್ಯ ನಡೆಸಿದ್ದು, ದೌರ್ಜನ್ಯದ ವೇಳೆ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದರಿಂದ ಬಾಲಕ ಪರಾರಿಯಾಗಿದ್ದಾನೆ. ಈ ಕುರಿತು ಬಾಲಕಿ ತಾಯಿಯ ಬಳಿ ಹೇಳಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ.

ಘಟನೆ ಕುರಿತು ಪಾತಪಾಳ್ಯ ಪೋಲೀಸ್ ಠಾಣೆಯಲ್ಲಿ ‘ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯ ಕಾಯ್ದೆ’ (ಪೊಕ್ಸೊ) ಅಡಿ ಪ್ರಕರಣ ದಾಖಲಾಗಿದ್ದು, ನೊಂದ ಬಾಲಕಿಗೆ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ದೌರ್ಜನ್ಯ ನಡೆಸಿದ ಆರೋಪಕ್ಕೆ ಒಳಗಾಗಿ ಕಾನೂನು ಸಂಘರ್ಷ ಎದುರಿಸುತ್ತಿರುವ ಬಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು, ಚಿಕ್ಕಬಳ್ಳಾಪುರದ ಬಾಲ ನ್ಯಾಯಮಂಡಳಿಗೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT