ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ಗೆ ಅವಮಾನ: ಆರೋಪ

ಚಿಕ್ಕಬಳ್ಳಾಪುರದಲ್ಲಿ ಸಂವಿಧಾನ ಚೌಕಟ್ಟಿನಲ್ಲಿ ಯಾವುದೂ ನಡೆಯುತ್ತಿಲ್ಲ: ಟೀಕೆ
Last Updated 7 ಡಿಸೆಂಬರ್ 2022, 4:28 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಅಂಬೇಡ್ಕರ್ ಅವರ 66ನೇ ಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾಡಳಿತದಿಂದ ನಗರದ ಪದವಿ ವಿದ್ಯಾರ್ಥಿಗಳ ಹಾಸ್ಟೆಲ್‌ ಆವರಣದಲ್ಲಿರುವ ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಧ್ಯಾಹ್ನ 12.30 ಆದರೂ ಮಾಲಾರ್ಪಣೆ ನಡೆಯದಿರುವುದಕ್ಕೆಜೆಡಿಎಸ್ ಮುಖಂಡರು ಆಕ್ರೋಶವ್ಯಕ್ತಪಡಿಸಿದರು.ಜೈ ಭೀಮ್ ಎಂದು ಘೋಷಣೆಗಳನ್ನು ಕೂಗಿದರು.

ಸಚಿವ ಡಾ.ಕೆ. ಸುಧಾಕರ್ ಬೆಳಿಗ್ಗೆ 10.30ಕ್ಕೆ ಅಂಬೇಡ್ಕರ್ ಅವರ ಪ್ರತಿಮೆಗೆಮಾಲಾರ್ಪಣೆ ಮಾಡುವರು ಎಂದು ತಿಳಿಸಲಾಗಿತ್ತು. ಪೊಲೀಸರು ಮತ್ತು ಅಧಿಕಾರಿಗಳು ಸಚಿವರು ಬರುತ್ತಾರೆ ಎಂದು ಕಾದಿದ್ದರು. 12.30ರ ವೇಳೆಗೆ ಪ್ರತಿಮೆಗೆ ಮಾಲಾರ್ಪಣೆ ಮಾಡಲುಸ್ಥಳಕ್ಕೆ ಜೆಡಿಎಸ್ ಮುಖಂಡರು ಬಂದರು. ಇಷ್ಟು ಸಮಯವಾದರೂ ಪ್ರತಿಮೆಗೆ ಯಾರೂ ಮಾಲಾರ್ಪಣೆ
ಮಾಡಿರಲಿಲ್ಲ.

ಈ ವೇಳೆ ಮಾತನಾಡಿದ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ‘10.30ಕ್ಕೆ ಸರ್ಕಾರಿ ಕಾರ್ಯಕ್ರಮ ಇದೆ. ಅದು ಪೂರ್ಣವಾದ ತರುವಾಯ ನಾವು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸೋಣ ಎಂದು ಬಂದೆವು. ಆದರೆ 12.45 ಆದರೂ ಪ್ರತಿಮೆಗೆ ಮಾಲಾರ್ಪಣೆ ಮಾಡಿಲ್ಲ. ಶಿಷ್ಟಾಚಾರದ ಪ್ರಕಾರ ಸಚಿವರು ಮತ್ತು ಜಿಲ್ಲಾಧಿಕಾರಿ ಮಾಲಾರ್ಪಣೆ ಮಾಡಬೇಕು. ಅಲ್ಲಿಯವರೆಗೂ ಯಾರೂ ಮಾಲಾರ್ಪಣೆ ಮಾಡಬಾರದು. ಮಾಡಿದರೆ ಪ್ರಕರಣ ದಾಖಲಿಸುತ್ತೇವೆ ಎಂದು ಬೆದರಿಸಿದ್ದಾರೆ. ಕೆಲವರು ಹಾಕಿದ್ದ ಹೂ ಮಾಲೆ ತೆಗೆದಿದ್ದಾರೆ’ ಎಂದು ದೂರಿದರು.

ಯಾವುದೇ ಸರ್ಕಾರಿ ಕಾರ್ಯಕ್ರಮ ನಿಗದಿತ ಸಮಯಕ್ಕೆ ನಡೆಯಬೇಕು. ಯಾರೊ ಬರುತ್ತಾರೆ ಎಂದು ಕಾಯುತ್ತ ಕೂರುವುದಲ್ಲ. ಇದುಸಂವಿಧಾನ ಶಿಲ್ಪಿಗೆ ಮಾಡಿದ ಅವಮಾನ. ಇಂತಹ ಬೆಳವಣಿಗೆಗಳಿಂದ ಇಲ್ಲಿ ಏನು
ನಡೆಯುತ್ತಿದೆ ಎನ್ನುವುದು ಗೊತ್ತಾಗುತ್ತದೆ. ಚಿಕ್ಕಬಳ್ಳಾಪುರದಲ್ಲಿ ಸಂವಿಧಾನ ಬದ್ಧವಾಗಿ ಕಾನೂನಿನ ಚೌಕಟ್ಟಿನಲ್ಲಿ ಯಾವುದೂ ನಡೆಯುತ್ತಿಲ್ಲ ಎಂದು ದೂರಿದರು.

ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ. ಮುನೇಗೌಡ ಮಾತನಾಡಿ, ಪ್ರತಿ ವರ್ಷವೂ ಅಂಬೇಡ್ಕರ್ ಅವರ ಪುಣ್ಯಸ್ಮರಣೆ ದಿನ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತೇವೆ. ನಾವು ಸ್ಥಳಕ್ಕೆ ಹೋದ ಸಮಯದಲ್ಲಿ ಯಾವುದೇ ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಇರಲಿಲ್ಲ. ವಿದ್ಯಾರ್ಥಿಗಳು ಹೂವಿನ ಹಾರ ಹಾಕಲು ಹೋದಾಗ ವಾಪಸ್ ತೆಗೆಸಿದ್ದಾರೆ ಎಂದರು.

ಮುಖಂಡರಾದ ಶಿವಣ್ಣ, ವೆಂಕಟೇಶ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT