ಶಿಡ್ಲಘಟ್ಟ: ತಾಲ್ಲೂಕಿನ ಸಾದಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾದಲಮ್ಮ ಕಲ್ಯಾಣಿ ಸ್ವಚ್ಛತಾ ಆಂದೋಲನವನ್ನು ತಾಲ್ಲೂಕು ಪಂಚಾಯಿತಿ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿತ್ತು.

ಕಲ್ಯಾಣಿ ಸ್ವಚ್ಛತಾ ಆಂದೋಲನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರೂ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ, ಕಲ್ಯಾಣಿಗಳಲ್ಲಿ ನೀರು ನಿಂತು ಮಲಿನವಾದರೆ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಘೀ, ಮಲೇರಿಯಾ ಮತ್ತು ಚಿಕುನ್ ಗುನ್ಯಾದಂತಹ ರೋಗಗಳು ಹರಡುತ್ತವೆ. ಆದ್ದರಿಂದ ನೀರು ಕಲುಷಿತವಾಗದಂತೆ ನೋಡಿಕೊಳ್ಳಬೇಕು. ಕಲ್ಯಾಣಿಗಳು ನಮ್ಮ ಸಾಂಪ್ರದಾಯಿಕ ಜಲಮೂಲಗಳಾಗಿವೆ. ಇವುಗಳನ್ನು ಸ್ವಚ್ಛವಾಗಿರಿಸುವುದರಿಂದ ಅಂತರ್ಜಲ ಮಟ್ಟ ವೃದ್ಧಿಸುವುದಲ್ಲದೆ, ಶುದ್ಧ ನೀರಿನ ಲಭ್ಯತೆ ಹೆಚ್ಚಾಗುತ್ತದೆ. ಕಲ್ಯಾಣಿ ಸುತ್ತಮುತ್ತ ಪ್ಲಾಸ್ಟಿಕ್, ಪೂಜಾ ಸಾಮಗ್ರಿ ಅಥವಾ ಇತರ ತ್ಯಾಜ್ಯಗಳನ್ನು ಎಸೆಯಬಾರದು. ಇದು ಕೇವಲ ಧಾರ್ಮಿಕ ಸ್ಥಳವಲ್ಲ. ನಮ್ಮ ಆರೋಗ್ಯದ ದೃಷ್ಟಿಯಿಂದಲೂ ಮುಖ್ಯವಾದುದು ಎಂದು ಜನರಿಗೆ ಮನವರಿಕೆ ಮಾಡಿಕೊಟ್ಟರು.

ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಯೋಜನಾ ಅಧಿಕಾರಿ ಅನಿಲ್ ಕುಮಾರ, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಸಾದಲಿ ವೈದ್ಯ ಡಾ. ಯಶವಂತ್, ಸಾದಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಜ್ರೇಶ್, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ನರೇಗಾ ಸಿಬ್ಬಂದಿ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-16-210372248

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.