ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟ: ನೀರು ಪೂರೈಕೆ, ಪ್ರಾಕೃತಿಕ ವಿಪತ್ತು ಮಾಹಿತಿಗೆ ಸಹಾಯವಾಣಿ

Published 10 ಮೇ 2024, 13:45 IST
Last Updated 10 ಮೇ 2024, 13:45 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ತಾಲ್ಲೂಕಿನಲ್ಲಿ ಕುಡಿಯುವ ನೀರು ಪೂರೈಕೆ ಮಾಡಲು ಮತ್ತು ಮಳೆ ಸಹಿತ ಪ್ರಾಕೃತಿಕ ವಿಪತ್ತುಗಳ ಮಾಹಿತಿ ನೀಡಲು ಸಹಾಯವಾಣಿ ಕೇಂದ್ರ ತೆರೆಯಲಾಗಿದೆ ಎಂದು ತಹಶೀಲ್ದಾರ್ ಬಿ.ಎನ್.ಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ತಾಲ್ಲೂಕಿನಲ್ಲಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆಯಿಂದ ಯಾವುದೇ ರೀತಿಯ ಅನಾಹುತ ಸಂಭವಿಸಿದರೂ ಸಾರ್ವಜನಿಕರ ಮಾಹಿತಿಗಾಗಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ದೂರವಾಣಿ ಸಂಖ್ಯೆ 08158-256763 ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಮಾಡಿದರು.

ತಾಲ್ಲೂಕಿನ 11 ಗ್ರಾಮ ಹಾಗೂ ನಗರದ ವಿವಿಧ ವಾರ್ಡ್‌ಗಳಿಗೆ ಎಂಟು ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಎಲ್ಲಿಯೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಲ್ಲೂಕಿನಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಫ್ರೂಟ್ ತಂತ್ರಾಂಶದಲ್ಲಿ ನೊಂದಣಿಯಾಗಿರುವ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರದ ಹಣ ಜಮೆ ಮಾಡುವ ಕೆಲಸವನ್ನು ಮಾಡುತ್ತಿದೆ. ಕೆಲವೊಂದು ತಾಂತ್ರಿಕ ದೋಷಗಳನ್ನು ನಿವಾರಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧಿಸಿದಂತೆ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದ್ದು ಕ್ಷೇತ್ರದ ಗಡಿಗೆ ಹೊಂದಿಕೊಂಡಿರುವ ಚಿಲಕಲನೇರ್ಪು ವ್ಯಾಪ್ತಿಯಲ್ಲಿ ಚೆಕ್‌ಪೋಸ್ಟ್ ತೆರೆಯಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಸಭೆ, ಸಮಾರಂಭ ನಡೆಸಲು ಪೂರ್ವ ಅನುಮತಿಯನ್ನು ಪಡೆಯಲು ರಾಜಕೀಯ ಮುಖಂಡರುಗಳಿಗೆ ಸೂಚನೆ ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT