ಶಿಡ್ಲಘಟ್ಟ: ಗ್ಯಾರಂಟಿ ಯೋಜನೆಗಳ ಸವಲತ್ತುಗಳು ನೈಜ ಫಲಾನುಭವಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತಷ್ಟು ದಕ್ಷತೆ ಹಾಗೂ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ತಾ.ಪಂ ಇಒ ಆರ್.ಹೇಮಾವತಿ ಹೇಳಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿ ಮತ್ತು ಸಮನ್ವಯತೆ ಪ್ರಮುಖ ಪಾತ್ರ ವಹಿಸುತ್ತದೆ. ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಉತ್ತಮ ಫಲಿತಾಂಶ ಸಾಧಿಸಲು ಪ್ರಯತ್ನಿಸಬೇಕು ಎಂದರು.

ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಸಮಗ್ರ ಪರಿಷ್ಕರಣೆ ಹಾಗೂ ಅನರ್ಹರು ಸೌಲಭ್ಯ ಪಡೆಯುತ್ತಿದ್ದರೆ ಅದನ್ನು ತಡೆಗಟ್ಟಿ, ಕೇವಲ ಅರ್ಹರಿಗೆ ಮಾತ್ರ ಯೋಜನೆಗಳನ್ನು ತಲುಪಿಸುವ ಬಗ್ಗೆ ಸಭೆಗಳಲ್ಲಿ ಸೂಚಿಸಲಾಯಿತು. ಜಿಲ್ಲಾ ಹಾಗೂ ತಾಲ್ಲೂಕು ಮಾರ್ಗದಲ್ಲಿ ಸಂಚರಿಸುವ ಬಸ್ಗಳು ನಿಗದಿತ ಸಮಯಕ್ಕೆ ಸರಿಯಾಗಿ ಸಂಚಾರ ಮಾಡಬೇಕು. ಎರಡು ಬಸ್ಗಳು ಒಂದೇ ಸಮಯಕ್ಕೇ ಬರುವಂತಹ ಬಸ್ಗಳನ್ನು ಬದಲಾವಣೆ ಮಾಡಿ ನಿತ್ಯ ಓಡಾಡುವ ಪ್ರಯಾಣಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮುನಿಯಪ್ಪ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಜೀವನ ಮಟ್ಟವನ್ನು ಉತ್ತಮಗೊಳಿಸುವಲ್ಲಿ ಹೆಚ್ಚು ಪರಿಣಾಮಕಾರಿಯಾಗಿದೆ ಎಂದರು.

ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮುನಿಯಪ್ಪ, ಸಿಡಿಪಿಒ ವಿದ್ಯಾ ವಸ್ತ್ರದ್, ಬೆಸ್ಕಾಂ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಕೆಎಸ್ಆರ್ಟಿಸಿ ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-16-420705750

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.