ಶಿಡ್ಲಘಟ್ಟ: ತಾಲ್ಲೂಕಿನ ಮಳ್ಳೂರು ಗ್ರಾಮದಲ್ಲಿ ಮೂರನೇ ವರ್ಷದ ರೇಣುಕ ಯಲ್ಲಮ್ಮ ಕರಗ ಮಹೋತ್ಸವ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ರೇಣುಕ ಯಲ್ಲಮ್ಮ ದೇವಿಗೆ ಹೂವಿನ ಅಲಂಕಾರ, ದೀಪಾಲಂಕಾರ ಮಾಡಲಾಗಿತ್ತು. ಗ್ರಾಮವನ್ನು ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು. ಬೆಂಗಳೂರಿನ ವಿದ್ಯಾರಣ್ಯಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಪೂಜಾರಿ ಸಂತೋಷ್ ಅವರು ಕರಗ ಹೊತ್ತು ಗ್ರಾಮವೆಲ್ಲ ಸುತ್ತಿದರು. ಮನೆಗಳ ಮುಂದೆ ರಂಗೋಲಿ ಹಾಕಿ ಕರಗ ಬಂದಾಗ ಪೂಜೆ ಸಲ್ಲಿಸಿದರು. ಬೆಂಗಳೂರು ತಮಟೆ ಕಲಾ ತಂಡದವರು ಹಾಜರಿದ್ದರು. ಸಂಜೆ ಆರ್ಕೆಸ್ಟ್ರಾ ವ್ಯವಸ್ಥೆ ಮಾಡಲಾಗಿತ್ತು.

ಕಲಾವಿದ ಡಿ.ಎಂ. ಶ್ರೀನಿವಾಸ್, ಮುನಿಮಾಸಪ್ಪ, ಸತೀಶ್ ಕುಮಾರ್. ಎಂ.ಎಚ್., ಮಳ್ಳೂರು ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-16-1328017427

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.