ಶಿಡ್ಲಘಟ್ಟ: ಅಯೋಧ್ಯ ವೈಶ್ಯ ನಾಮಧಾರಿ ನಗರ್ತ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ವಿತರಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ಮೊದಲಿನಿಂದಲೂ ಮನವಿ ನೀಡುವುದು, ಹೋರಾಟ ಮಾಡಿಕೊಂಡೇ ಬರಲಾಗುತ್ತಿದೆ. ಆದರೆ, ಸ್ಪಂದನೆ ಮಾತ್ರ ಸಿಗುತ್ತಿಲ್ಲ ಎಂದು ಸಮುದಾಯದ ಬ್ಯಾಟರಾಯಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.

ಅಯೋಧ್ಯ ವೈಶ್ಯ ನಾಮಧಾರಿ ನಗರ್ತ ಸಮುದಾಯಕ್ಕೆ ಅಧಿಕೃತ ಮಾನ್ಯತೆ ನೀಡಿ ಜಾತಿ ಪ್ರಮಾಣ ವಿತರಿಸುವಂತೆ ಒತ್ತಾಯಿಸಿ, ಸಮುದಾಯದ ಮುಖಂಡರೊಂದಿಗೆ ಗ್ರೇಡ್ 2 ತಹಶೀಲ್ದಾರ್ ಕೆ.ಎನ್.ಎಂ.ಮಂಜುನಾಥ್ ಅವರಿಗೆ ಬುಧವಾರ ಮನವಿ ಸಲ್ಲಿಸಿ ಮಾತನಾಡಿದರು.

ನಗರ್ತ, ನಾಮಧಾರಿ ನಗರ್ತ, ನಾಮಧಾರಿ ಎಂಬ ಹೆಸರಿನಲ್ಲಿ ಹಲವು ದಶಕಗಳಿಂದ ಶಾಲಾ ದಾಖಲೆ, ಆದಾಯ ದಾಖಲೆಗಳಲ್ಲಿ ಸೇರಿದಂತೆ ವಿವಿಧ ದಾಖಲೆಗಳಲ್ಲಿ ನಮೂದಿಸಲಾಗಿದೆ. ಈ ಹೆಸರುಗಳಲ್ಲಿ ಇರುವ ವ್ಯತ್ಯಾಸಗಳಿಂದ ಇತ್ತೀಚಿನ ದಿನದಲ್ಲಿ ಗೊಂದಲ ಸೃಷ್ಟಿಯಾಗಿದೆ. ಎಲ್ಲ ಹೆಸರುಗಳು ಒಂದೇ ಸಮುದಾಯ ಸೂಚಿಸುತ್ತವೆ. ವರ್ಗದವರ ಜಾತಿಯನ್ನು ಅಧಿಕೃತ ಗೆಜೆಟ್ ಪಟ್ಟಿಯಲ್ಲಿ ಸರ್ಕಾರ ಸೇರಿಸದಿರುವುದರಿಂದ ಪ್ರಮಾಣಪತ್ರ ಪಡೆಯಲು ಕಷ್ಟವಾಗುತ್ತಿದೆ ಎಂದರು.

ನೆರೆಯ ಆಂಧ್ರಪ್ರದೇಶ ಹಾಗು ತಮಿಳುನಾಡಿನಲ್ಲಿ ಸಮುದಾಯದವರು 2ಎ ವರ್ಗದ ಸವಲತ್ತು ಪಡೆಯುತ್ತಿದ್ದಾರೆ. ರಾಜ್ಯದಾದ್ಯಂತ ಸುಮಾರು 2 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಸಮುದಾಯದವರು ಜಾತಿ ಪ್ರಮಾಣ ಪತ್ರ ಸಿಗದೆ ಪರದಾಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ವೇಳೆ ಸಮುದಾಯದ ದೇವರಾಜ್, ದಾಮೋದರ್, ಸುಗುಟೂರು ಸತೀಶ್, ನಾಗರಾಜ್ ಬಾಬು, ಮಲ್ಲಪ್ಪ, ಹರೀಶ್, ನವೀನ್, ಮಂಜುನಾಥ್ ಪ್ರಸಾದ್, ಪ್ರಕಾಶ್ಬಾಬು, ಶ್ರೀ ರಾಮಪ್ಪ, ಅಶ್ವತ್ಥ, ಭೀಮೇಶ್, ಚಂದ್ರಶೇಖರ್, ವೆಂಕಟೇಶ್ ನಾಗರಾಜ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-16-1272481565

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.