ಶಿಡ್ಲಘಟ್ಟ: ನಗರದ ಹೊರವಲಯದ ಹನುಮಂತಪುರ ಗೇಟ್ ಬಳಿಯ ಆಂಜನೇಯ ದೇವಸ್ಥಾನದ ಆವರಣದಿಂದ ಜೂನ್ 7ರಂದು ಬೆಳಗ್ಗೆ 11 ಗಂಟೆಗೆ ಶೋಭಾಯಾತ್ರೆ ಆರಂಭವಾಗಲಿದೆ ಎಂದು ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್ಟ್ ಅಧ್ಯಕ್ಷ ಬಿ. ವೆಂಕಟೇಶ್ ತಿಳಿಸಿದರು.

ಈ ಶೋಭಾಯಾತ್ರೆಯು ಜಾತ್ಯತೀತ ಹಾಗೂ ಪಕ್ಷಾತೀತವಾಗಿರಲಿದ್ದು, ಹಿಂದೂಗಳು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶೋಭಾಯಾತ್ರೆಯಲ್ಲಿ ಜನಪದ ಕಲಾ ತಂಡಗಳು, 10 ಅಡಿ ಎತ್ತರ ರಾಮ ಮೂರ್ತಿ, 10 ಅಡಿ ಉದ್ದದ ಶಿವನ ವಿಗ್ರಹ ಹಾಗೂ ಕುರುಕ್ಷೇತ್ರ ರಥ ಹನುಮ ಮತ್ತು ನರಸಿಂಹ ವೇಷಧಾರಿಗಳು, ಕೇರಳದ ಚಂಡೆ ವಾಧ್ಯ ಇನ್ನಿತರೆ ಕಲಾತಂಡಗಳು ಪಾಲ್ಗೊಳ್ಳಲಿವೆ ಎಂದರು.

ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್ಟ್ ಗೌರವಾಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಅನಿಲ್ಕುಮಾರ್.ಜಿ.ಕೆ, ಭರತ್, ರವಿಚಂದ್ರ, ನಾಗೇಶ್, ಲಕ್ಷ್ಮೀಪತಿ, ಕಿರಣ್, ರಾಮಾಂಜಿನೇಯ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-16-435215552

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.