ಶಿಡ್ಲಘಟ್ಟ: ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ಶಾಂತ ಚಿತ್ತದಿಂದ ಪರೀಕ್ಷೆ ಎದುರಿಸಬೇಕು. ಮನೆಗಳಲ್ಲೂ ಸಹ ಪೋಷಕರು ಮಕ್ಕಳ ಮೇಲೆ ವಿನಾಕಾರಣ ಒತ್ತಡ ಹಾಕುವುದು ಬೇಡ ಎಂದು ತಹಶೀಲ್ದಾರ್ ಎನ್.ಗಗನಸಿಂಧು ಹೇಳಿದರು.

ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಎಸ್ಎಸ್ಎಸ್ಎಲ್ ಪರೀಕ್ಷೆ ಸಂಬಂಧ ನಡೆದ ವಿವಿಧ ಇಲಾಖೆಗಳ ಸಮನ್ವಯ ಸಭೆಯಲ್ಲಿ ಮಾತನಾಡಿದರು.

ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೂ ಪರೀಕ್ಷೆಗಳು ನಡೆಯಲಿದ್ದು, ಇದಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೆ ಸಮಚಿತ್ತದಿಂದ ಪರೀಕ್ಷೆ ಬರೆಯಿರಿ ಎಂದು ಸಲಹೆ ನೀಡಿದರು.

ಜತೆಗೆ ಪೋಷಕರು ಕೂಡ ತಮ್ಮ ಮಕ್ಕಳ ಮೇಲೆ ವಿನಾಕಾರಣ ಹೆಚ್ಚು ಅಂಕಗಳಿಸುವಂತೆ ಒತ್ತಡ ಹಾಕಬಾರದು. ಅವರು ಪರೀಕ್ಷೆಗೆ ಶಾಂತ ಚಿತ್ತವಾಗಿ ಸಿದ್ಧವಾಗುವ ವಾತಾವರಣವನ್ನು ಮನೆಯಲ್ಲಿ ನಿರ್ಮಿಸಿ ಎಂದು ಕೋರಿದ ಅವರು, ಈ ಬಾರಿ ಶಿಡ್ಲಘಟ್ಟದಲ್ಲಿ ಶೇ 100 ರಷ್ಟು ಫಲಿತಾಂಶ ಬರುವ ಭರವಸೆಯಿದೆ ಎಂದರು.

ತಾಲ್ಲೂಕಿನಲ್ಲಿ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಒಟ್ಟು 10 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, 1,363 ಬಾಲಕರು, 1,323 ಬಾಲಕಿಯರು ಸೇರಿ ಒಟ್ಟು 2,686 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 10 ಪರೀಕ್ಷಾ ಕೇಂದ್ರಗಳಲ್ಲಿ 190 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪ್ರತಿ ಪರೀಕ್ಷಾ ಕೊಠಡಿಗೆ ಒಬ್ಬರಂತೆ 190 ಪರೀಕ್ಷಾ ಕೊಠಡಿ ಮೇಲ್ವಿಚಾರಕರು, 10 ಮಂದಿ ಮುಖ್ಯ ಅಧೀಕ್ಷಕರು, 4 ಮಂದಿ ಉಪ ಮುಖ್ಯ ಅಧೀಕ್ಷಕರು, 10 ಮಂದಿ ಕಸ್ಟೋಡಿಯನ್ ಇರಲಿದ್ದಾರೆ ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರದಲ್ಲೂ ಮೊಬೈಲ್ ಬಳಕೆ ನಿಷೇಧಿಸಿದ್ದು, ಮೇಲ್ವಿಚಾರಕರದ್ದೂ ಸೇರಿ ಎಲ್ಲರ ಮೊಬೈಲ್ ಸಂಗ್ರಹಿಸುವ 10 ಮಂದಿ ಮೊಬೈಲ್ ಸ್ವಾಧೀನಾಧಿಕಾರಿಗಳು, 10 ಸ್ಥಾನಿಕ ಜಾಗೃತ ದಳ ಅಧಿಕಾರಿಗಳು, 20 ಮಂದಿ ಪೊಲೀಸ್ ಸಿಬ್ಬಂದಿ, 10 ಮಂದಿ ಆರೋಗ್ಯ ಸಿಬ್ಬಂದಿ ಯನ್ನೊಳಗೊಂಡ ಒಟ್ಟು 300 ಮಂದಿ ಪರೀಕ್ಷಾ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ನಗರಸಭೆ ಪೌರಾಯುಕ್ತೆ ಜಿ.ಅಮೃತ, ಶಿಕ್ಷಣ ಇಲಾಖೆಯ ಇಸಿಓ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಪರೀಕ್ಷಾ ಕೇಂದ್ರ

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಪುರಬೈರೇನಹಳ್ಳಿ ಜ್ಞಾನಜ್ಯೋತಿ ಶಾಲೆ, ಜಂಗಮಕೋಟೆ ಕ್ರಾಸ್ ಸರ್ಕಾರಿ ಪದವಿ ಪೂರ್ವ ಕಾಲೇಜು, ಶಿಡ್ಲಘಟ್ಟ ಸರ್ಕಾರಿ ಪ್ರೌಡಶಾಲೆ, ಮೆಲೂರು ಕನಾಟಕ ಪಬ್ಲಿಕ್ ಶಾಲೆ, ಬಶೆಟ್ಟಹಳ್ಳಿ ವಾಸವಿ ವಿದ್ಯಾ ಸಂಸ್ಥೆ, ಶಿಡ್ಲಘಟ್ಟ ಮೊರಾರ್ಜಿ ದೇಸಾಯಿ ವಸತಿ ಶಾಲೆ, 11ನೇ ಮೈಲಿ ಎಸ್.ವಿ.ಎಚ್.ಎಸ್ ಮಳ್ಳೂರು ಬಿಜಿಎಸ್ ಪಬ್ಲಿಕ್ ಶಾಲೆ, ಶಿಡ್ಲಘಟ್ಟ ಸರ್ಕಾರಿ ಪ್ರೌಡಶಾಲೆ, ಜಂಗಮಕೋಟೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.