ಮಂಗಳವಾರ, ಆಗಸ್ಟ್ 3, 2021
28 °C

ಶಿಡ್ಲಘಟ್ಟ: ತಾ.ಪಂ ಅಧ್ಯಕ್ಷರಾಗಿ ಎಂ.ಕೆ.ರಾಜಶೇಖರ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚೀಮಂಗಲ ಕ್ಷೇತ್ರದ ಜೆಡಿಎಸ್‌ ಸದಸ್ಯ ಎಂ.ಕೆ.ರಾಜಶೇಖರ್ ಅಧ್ಯಕ್ಷರಾಗಿ, ಕುಂಬಿಗಾನಹಳ್ಳಿ ಕ್ಷೇತ್ರದ ಜೆಡಿಎಸ್‌ ಸದಸ್ಯೆ ಮುನಿನರಸಮ್ಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಈ ಹಿಂದೆ ಅಧ್ಯಕ್ಷರಾಗಿದ್ದ ಬಿ.ವಿ.ನಾರಾಯಣಸ್ವಾಮಿ, ಉಪಾಧ್ಯಕ್ಷ ಮುನಿಯಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಗಳಿಗೆ ಮಂಗಳವಾರ ಚುನಾವಣೆ ನಡೆಯಿತು.

ಕಾಂಗ್ರೆಸ್‌ ಪಕ್ಷದಿಂದ ಯಾರು ನಾಮಪತ್ರ ಸಲ್ಲಿಸಿರದ ಕಾರಣ ಚುನಾವಣಾಧಿಕಾರಿ ಎ.ಎನ್.ರಘುನಂದನ್ ಅವಿರೊಧ ಆಯ್ಕೆಯನ್ನು ಘೋಷಿಸಿದರು.

ಕಾಂಗ್ರೆಸ್ ಸದಸ್ಯರು ಗೈರು: ಕಳೆದ ಬಾರಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದ ಕಾಂಗ್ರೆಸ್ ಸದಸ್ಯರು, ಈ ಬಾರಿ ಗೈರಾಗಿದ್ದರು. ತಾಲ್ಲೂಕು ಪಂಚಾಯಿತಿಯ 17 ಸದಸ್ಯರಲ್ಲಿ ಜೆಡಿಎಸ್‌ನ 9, ಕಾಂಗ್ರೆಸ್ 8 ಮಂದಿ ಸದಸ್ಯರಿದ್ದಾರೆ. ಜೆಡಿಎಸ್‌ನ 8 ಹಾಗೂ ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಬಂದಿದ್ದ ಇಬ್ಬರು ಸದಸ್ಯರನ್ನೊಳಗೊಂಡು ಹತ್ತು ಮಂದಿ ತಾಲ್ಲೂಕು ಪಂಚಾಯಿತಿ ಸದಸ್ಯರು ಚುನಾವಣೆಯಲ್ಲಿ ಪಾಲ್ಗೊಂಡಿದ್ದರು.

ತಹಶೀಲ್ದಾರ್ ಕೆ.ಅರುಂದತಿ, ತಾಲ್ಲೂಕು ಪಂಚಾಯಿತಿ ಇಒ ಬಿ.ಶಿವಕುಮಾರ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಶಿರಸ್ತೇದಾರ್ ಮಂಜುನಾಥ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.