ಶಿಡ್ಲಘಟ್ಟ: ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುತ್ತದೆ. ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ 88847–77235 ಸಹಾಯವಾಣಿಗೆ ಕರೆ ಮಾಡುವಂತೆ ತಾಲ್ಲೂಕು ಪಂಚಾಯಿತಿ ಇಒ ಆರ್. ಹೇಮಾವತಿ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರುತ್ತದೆ. ಕುಡಿಯುವ ನೀರಿನ ಪೈಪ್ಲೈನ್ ಒಡೆದು ಹೋಗಿ ನೀರು ವ್ಯರ್ಥವಾಗಿ ಹರಿದು ಹೋಗುತ್ತದೆ. ಕೆಲವು ಕಡೆ ಚರಂಡಿ ಹಾಗೂ ಕೊಳಚೆ ನೀರಿನಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾದು ಹೋಗಿರುತ್ತದೆ. ಇಂಥ ಕಡೆಗಳಲ್ಲಿ ಕುಡಿಯುವ ನೀರಿನೊಂದಿಗೆ ಕಲುಷಿತ ನೀರು ಸೇರಿಕೊಳ್ಳುತ್ತದೆ. ಇಂಥ ಎಲ್ಲ ಸಮಸ್ಯೆಗಳನ್ನು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಗಮನಕ್ಕೆ ತಂದಲ್ಲಿ ಬಗೆಹರಿಸಲಾಗುವುದು ಎಂದು ಹೇಳಿದರು.

ಇಂತಹ ಸಮಸ್ಯೆಗಳು ಕಂಡುಬಂದಲ್ಲಿ 88847–77235 ಸಹಾಯವಾಣಿಗೆ ಕರೆ ಮಾಡಬಹುದು ಅಥವಾ ಫೋಟೊ ತೆಗೆದು ವಾಟ್ಸ್ಆ್ಯಪ್ ಮಾಡಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-16-1629649844

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.