ಶಿಡ್ಲಘಟ್ಟ: ನಗರದ ನ್ಯಾಯಾಲಯದ ಸಭಾಂಗಣದಲ್ಲಿ ಶುಕ್ರವಾರ ಕಾನೂನು ಸೇವಾ ಸಮಿತಿ ಮತ್ತು ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನ ಮತ್ತು ವಿಶ್ವ ಜಲ ದಿನದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಮಾತನಾಡಿ, ‘ನೀರು ಇಲ್ಲದಿದ್ದರೆ ಜೀವನವೇ ಇಲ್ಲ ಎಂಬ ಮಾತು ಎಷ್ಟು ಸತ್ಯವೊ, ನೀರನ್ನು ವ್ಯರ್ಥ ಮಾಡುವುದು ಅಷ್ಟೇ ದೊಡ್ಡ ಅಪರಾಧ. ನಾವು ಮನೆಯ ಹಂತದಲ್ಲೇ ನೀರನ್ನು ಉಳಿಸಬೇಕು’ ಎಂದು ಹೇಳಿದರು.

ನಮ್ಮ ದೈನಂದಿನ ಜೀವನದಲ್ಲಿ ಸಣ್ಣ ಬದಲಾವಣೆಗಳ ಮೂಲಕ ಮನೆಗಳಲ್ಲಿ ಸಾಕಷ್ಟು ನೀರು ಉಳಿಸಬಹುದು. ನೀರಿನ ಮರುಬಳಕೆ, ಮಳೆ ನೀರು ಕೊಯ್ಲು ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

‘ಹನಿ ಹನಿ ಕೂಡಿದರೆ ಹಳ್ಳ’ ಎನ್ನುವಂತೆ, ನಾವು ವ್ಯರ್ಥ ಮಾಡುವ ಪ್ರತಿಯೊಂದು ಹನಿಯೂ ಭವಿಷ್ಯದ ದೊಡ್ಡ ಬರಗಾಲಕ್ಕೆ ಕಾರಣವಾಗಬಹುದು. ನೀರಿನ ಸಂರಕ್ಷಣೆ ಕೇವಲ ಸರ್ಕಾರದ ಕೆಲಸವಲ್ಲ. ಅದು ಪ್ರತಿ ಮನೆಯ ಜವಾಬ್ದಾರಿ. ಮುಂದಿನ ಪೀಳಿಗೆಗೆ ನೀರು ಉಳಿಸಿಕೊಡುವುದು ನಮ್ಮ ಆದ್ಯ ಕರ್ತವ್ಯವಾಗಲಿ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ ಸಿ.ಎಸ್ ಮಾತನಾಡಿ, ಎಚ್ಚೆತ್ತ ಗ್ರಾಹಕನೇ ಸದೃಢ ದೇಶದ ಆಧಾರ. ನಾವು ದುಡಿಮೆಯಿಂದ ಸಂಪಾದಿಸಿದ ಹಣದಿಂದ ಖರೀದಿಸುವ ಸಾಮಾನುಗಳು ನಮ್ಮ ಸುರಕ್ಷತೆಗೆ ಧಕ್ಕೆ ತರುವಂತಿಲ್ಲ. ಮೋಸವಾದರೆ ಗ್ರಾಹಕ ನ್ಯಾಯಾಲಯಕ್ಕೆ ದೂರು ಸಲ್ಲಿಸಿ ನ್ಯಾಯ ಪಡೆಯಬೇಕು. ನಮ್ಮ ಹಕ್ಕುಗಳನ್ನು ತಿಳಿದು, ಜಾಗೃತರಾಗಬೇಕು ಎಂದು ಹೇಳಿದರು.

ಸಹಾಯಕ ಸರ್ಕಾರಿ ಅಭಿಯೋಜಕ ಮೊಹಮ್ಮದ್ ಖಾಜಾ, ರೂಪ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್, ಆರ್.ಮುನಿಶಾಮಿಗೌಡ, ಸತ್ಯನಾರಾಯಣ, ಶಾಬುದ್ದೀನ್, ದ್ಯಾವಪ್ಪ, ರಾಘವೇಂದ್ರಗೌಡ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-16-1912885478

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.