ಶಿಡ್ಲಘಟ್ಟ: ‘ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನದಡಿ ನಾವೆಲ್ಲರೂ ಸುರಕ್ಷಿತವಾಗಿ ಬದುಕು ಕಟ್ಟಿಕೊಂಡಿದ್ದೇವೆ. ಡಾ.ಅಂಬೇಡ್ಕರ್ ಅವರನ್ನು ನಾವೆಲ್ಲರೂ ಗೌರವಿಸಬೇಕಾಗಿದೆ’ ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ತಾಲ್ಲೂಕಿನ ಮೇಲೂರು ಗ್ರಾಮದ ಚೆಂಗಲರಾಯರೆಡ್ಡಿ ವೃತ್ತದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.

‘ಅಂಬೇಡ್ಕರ್ ದೇಶದ ಜಾತಿ ವ್ಯವಸ್ಥೆ ಹೋಗಲಾಡಿಸುವ ಜತೆಗೆ ಶಿಕ್ಷಣದ ಮಹತ್ವ ತಿಳಿಸಿಕೊಟ್ಟವರು. ಮಹಿಳೆಯರಿಗೆ ಸಮಾನತೆ ಕೊಟ್ಟ ಮಹಾ ಪುರುಷರಾಗಿದ್ದಾರೆ. ಮಹಿಳೆಯರ ಪರವಾಗಿ ಮಂಡಿಸಿದ್ದ ಬಿಲ್ಗೆ ಲೋಕಸಭೆಯಲ್ಲಿ ವಿರೋಧ ವ್ಯಕ್ತವಾದಾಗ ಮಹಿಳೆಯರ ಪರವಾಗಿ ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಹೊರಬಂದಿದ್ದರು’ ಎಂದರು.

ಗ್ರಾ.ಪಂ ಮಾಜಿ ಉಪಾಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ‘ನೊಂದ ಸಮುದಾಯಗಳ ಜನರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದ ಅಂಬೇಡ್ಕರ್ ತಮ್ಮ ಜ್ಞಾನದ ಮೂಲಕ ಭಾರತದ ಸಂವಿಧಾನ ಶಿಲ್ಪಿಯಾಗಿ ರೂಪುಗೊಂಡರು. ಸಂವಿಧಾನ ಭಾರತದ ಪಾಲಿನ ಪವಿತ್ರ ಗ್ರಂಥ. ಈ ಪವಿತ್ರ ಗ್ರಂಥದ ಮೂಲಕ ಪ್ರಜಾಪ್ರಭುತ್ವಕ್ಕೊಂದು ಅರ್ಥ ಕಲ್ಪಿಸಿಕೊಡುವ ವ್ಯವಸ್ಥೆ ಜಾರಿಗೆ ತರಲಾಯಿತು’ ಎಂದರು.

ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್, ಮಾಜಿ ಉಪಾಧ್ಯಕ್ಷ ಮುನಿಕೃಷ್ಣಪ್ಪ, ಗ್ರಾ.ಪಂ ಪಿಡಿಒ ಶಾರದಾ, ಕಾರ್ಯದರ್ಶಿ ಶ್ರೀನಿವಾಸರೆಡ್ಡಿ, ದಾಸ್, ಶ್ರೀನಿವಾಸ್, ಎಂ.ಕೆ.ರವಿಪ್ರಸಾದ್, ಕುಶಾಲ್, ಧನು, ಗಿರೀಶ್ನಾಯಕ್, ಎಂ.ಜೆ. ಶ್ರೀನಿವಾಸ್, ಮಂಜುನಾಥ್, ದೇವರಾಜ್, ಎಂ.ಆರ್.ಶ್ರೀನಿವಾಸ್, ಗಜೇಂದ್ರಬಾಬು, ಶಿವಾನಂದ, ರವಿಕುಮಾರ್, ಮಹೇಶ್, ಶ್ರೀನಿವಾಸ್ ದಾಸ್, ಬಸ್ ಶ್ರೀನಿವಾಸ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ್, ದಲಿತ ಸಂಘರ್ಷ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-16-106478097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.